ಚಿತ್ತಾಪುರದಲ್ಲಿ ಪಥಸಂಚಲನ: ಆರ್ ಎಸ್ ಎಸ್ ಗೆ ಮತ್ತೆ ನಿರಾಸೆ
ಕಲಬುರಗಿ: ನವೆಂಬರ್ 2ರಂದು ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಉತ್ಸಾಹದಿಂದಿದ್ದ ಆರ್ ಎಸ್ ಎಸ್ ಗೆ ಮತ್ತೆ ನಿರಾಸೆಯಾಗಿದೆ.
ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥಸಂಚನಲಕ್ಕೆ ಅನುಮತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಕಲಬುರಗಿ ಹೈಕೋರ್ಟ್ ವಿಭಾಗೀಯ ಪೀಠ ಮತ್ತೊಂದು ಶಾಂತಿ ಸಭೆ ಮಾಡಲು ಸೂಚಿಸಿದೆ.
ನವೆಂಬರ್ 5ರಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಅಡ್ವೊಕೇಟ್ ಜನರಲ್ ಕಚೇರಿಯಲ್ಲಿಯೇ ಶಾಂತಿ ಸಭೆ ನಡೆಸಲು ಕೋರ್ಟ್ ಸೂಚಿಸಿ ವಿಚಾರಣೆಯನ್ನು ನವೆಂಬರ್ 7ಕ್ಕೆ ಮುಂದೂಡಿದೆ.
ನವೆಂಬರ್ 5ರಂದು ಅರ್ಜಿದಾರರು, ಅವರ ವಕೀಲರೊಂದಿಗೆ ಶಾಂತಿ ಸಭೆ ನಡೆಸಲು ಸೂಚಿಸಲಾಗಿದ್ದು, ಇಂತಹ ಘಟನೆಯಾದಾಗ ಪರಿಹಾರ ಹೇಗಿರಬೇಕೆಂಬುದಕ್ಕೆ ಇದು ಮಾರ್ಗಸೂಚಿಯಾಗಬೇಕು ಎಂದು ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್ ಅವರು ಸರ್ಕಾರ, ಅರ್ಜಿದಾರರಿಗೆ ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD



























