ಪುತ್ತೂರು | ಆಟೋ—ಕಾರಿನ ನಡುವೆ ಭೀಕರ ಅಪಘಾತ: ಮಗು, ವೃದ್ಧೆ ದಾರುಣ ಸಾವು
ಪುತ್ತೂರು: ಆಟೋ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ಕೂವರೆ ವರ್ಷದ ಮಗು ಹಾಗೂ ವೃದ್ಧೆ ಮೃತಪಟ್ಟಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪರ್ಪುಂಜ ಕೊಯಿಲತ್ತಡ್ಕದಲ್ಲಿ ನಡೆದಿದೆ.
ಸುಳ್ಯ ಕಡೆಯಿಂದ ಪುತ್ತೂರಿನತ್ತ ತೆರಳುತ್ತಿದ್ದ ಕಾರು ಚಾಲಕ ಬಸ್ ನ ಓವರ್ ಟೇಕ್ ಮಾಡಲು ಯತ್ನಿಸಿದ್ದಾನೆ. ಈ ವೇಳೆ ನಿಯಂತ್ರಣ ಕಳೆದುಕೊಂಡ ಕಾರು ಪುತ್ತೂರಿನಿಂದ ತಿಂಗಳಾಡಿ ಕಡೆಗೆ ತೆರಳುತ್ತಿದ್ದ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ.
ಆಟೋ ಚಾಲಕ ಹನೀಫ್ ಬನ್ನೂರು ಅವರ ಮಗಳು ಶಜ್ಮಾ ಫಾತಿಮಾ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆಕೆಯ ಅಜ್ಜಿ ಜುಲೈಕಾ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD



























