ವಿಕೃತ ಕಾಮಿ ಉಮೇಶ್‌ ರೆಡ್ಡಿ, ರನ್ಯಾ ರಾವ್‌ ಪ್ರಿಯಕರನಿಗೆ ಜೈಲಿನಲ್ಲಿ ರಾಜಾತಿಥ್ಯ: ವಿಡಿಯೋ ವೈರಲ್ - Mahanayaka

ವಿಕೃತ ಕಾಮಿ ಉಮೇಶ್‌ ರೆಡ್ಡಿ, ರನ್ಯಾ ರಾವ್‌ ಪ್ರಿಯಕರನಿಗೆ ಜೈಲಿನಲ್ಲಿ ರಾಜಾತಿಥ್ಯ: ವಿಡಿಯೋ ವೈರಲ್

parappana agrahara viral
08/11/2025

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಕೃತ ಕಾಮಿ ಉಮೇಶ್‌ ರೆಡ್ಡಿ ಹಾಗೂ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ ನಲ್ಲಿ ಬಂಧನ ಆಗಿರುವ ನಟಿ ರನ್ಯಾ ರಾವ್‌ ಪ್ರಿಯಕರ ತರುಣ್‌ ರಾಜ್‌  ಜೈಲಿನಲ್ಲಿ ಟಿವಿ, ಮೊಬೈಲ್ ಬಳಕೆ ಮಾಡುತ್ತಿರುವ ಫೋಟೋ, ವಿಡಿಯೋಗಳು ವೈರಲ್ ಆಗಿವೆ.

ಅತ್ಯಾಚಾರ ಪ್ರಕರಣದಲ್ಲಿ ಉಮೇಶ್ ರೆಡ್ಡಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದು, ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾನೆ. ಈತನಿಗೆ ಜೈಲಿನಲ್ಲಿ ಟಿವಿ, ಮೊಬೈಲ್ ಸೌಲಭ್ಯ ನೀಡಲಾಗಿದೆ. ಜೊತೆಗೆ ತನಗೆ ಬೇಕಾದ ಅಡುವೆ ಮಾಡಿಕೊಳ್ಳಲು ಜೈಲಿನೊಳಗೆ ಸೌಲಭ್ಯ ಕಲ್ಪಿಸಲಾಗಿದೆ. ಉಮೇಶ್ ರೆಡ್ಡಿ ಜೈಲಿನೊಳಗೆ ಆಂಡ್ರಾಯ್ಡ್ ಮತ್ತು ಕೀಪ್ಯಾಡ್ ಮೊಬೈಲ್ ಗಳನ್ನಿಟ್ಟುಕೊಂಡು ಮಾತನಾಡುತ್ತಿರುವ ವೀಡಿಯೊ ವೈರಲ್ ಆಗಿದೆ.

ರನ್ಯಾ ರಾವ್‌ ಪ್ರಿಯಕರನಿಗೂ ಐಶಾರಾಮಿ ಸೌಲಭ್ಯ:

ರನ್ಯಾ ರಾವ್‌ ಪ್ರಿಯಕರ ತೆಲುಗು ಸಿನಿಮಾ ನಟ ತರುಣ್‌ ರಾಜ್‌  ಕೂಡ ಜೈಲಿನೊಳಗೆ ಮೊಬೈಲ್ ಬಳಸುತ್ತಿರುವುದು ಟಿವಿ ಸೌಲಭ್ಯ ಕಲ್ಪಿಸಿರುವುದು ವೈರಲ್ ಆಗ್ತಾ ಇದೆ. ಸದ್ಯ ಪರಪ್ಪನ ಅಗ್ರಹಾರ ಜೈಲು ರಾಜಾತಿಥ್ಯಕ್ಕೆ ಹೆಸರುವಾಸಿಯಾದಂತಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ