ಶೃಂಗೇರಿ: ಪ್ರವಾಸಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ: ಇಬ್ಬರ ಸ್ಥಿತಿ ಚಿಂತಾಜನಕ - Mahanayaka

ಶೃಂಗೇರಿ: ಪ್ರವಾಸಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ: ಇಬ್ಬರ ಸ್ಥಿತಿ ಚಿಂತಾಜನಕ

chikkamagaluru
09/11/2025

ಚಿಕ್ಕಮಗಳೂರು: ಪ್ರವಾಸಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಬಸ್‌ ನಲ್ಲಿದ್ದ 5 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, 11 ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಶೃಂಗೇರಿ ತಾಲೂಕಿನ ಕಾವಡಿ ಕ್ರಷರ್ ಬಳಿ ನಡೆದಿದೆ.

ಗಂಭೀರವಾಗಿ ಗಾಯಗೊಂಡ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ವಾಸವಿ ಕಾಲೇಜಿನ ವಿದ್ಯಾರ್ಥಿಗಳು ಪ್ರವಾಸಕ್ಕೆ ಎಂದು ಶೃಂಗೇರಿಗೆ ಆಗಮಿಸುತ್ತಿತ್ತು. ಈ ವೇಳೆ ಶೃಂಗೇರಿಯ ಕಾವಡಿ ಕ್ರಷರ್ ಬಳಿ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿ ಪಲ್ಟಿಯಾಗಿದೆ.

ಘಟನೆಯಲ್ಲಿ ಗಾಯಗೊಂಡ 11 ವಿದ್ಯಾರ್ಥಿಗಳಿಗೆ ಶೃಂಗೇರಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಐದು ವಿದ್ಯಾರ್ಥಿಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದ್ದರಿಂದ ತಕ್ಷಣ ಅವರನ್ನು ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾದರು. ಈ ಘಟನೆಯ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ