ಜೇನುಗೂಡಿಗೆ ಕಲ್ಲೆಸೆತ: ಹೆಜ್ಜೇನು ದಾಳಿಗೆ 25ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ
ಚಿಕ್ಕಮಗಳೂರು: ಕಾಲೇಜು ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ನಡೆಸಿದ ಪರಿಣಾಮ 25ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ನಗರದ ಮೌಂಟೇನ್ ವ್ಯೂ ಕಾಲೇಜಿನಲ್ಲಿ ನಡೆದಿದೆ.
ಮಧ್ಯಾಹ್ನ ಊಟಕ್ಕೆ ಬಿಟ್ಟಾಗ ಜೇನಿನ ಗೂಡಿಗೆ ವಿದ್ಯಾರ್ಥಿಯೊಬ್ಬ ಕಲ್ಲು ಹೊಡೆದಿದ್ದ ಎನ್ನಲಾಗಿದೆ. ಈ ವೇಳೆ ಊಟಕ್ಕೆಂದು ಹೋಗಿದ್ದ 25 ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ನಡೆಸಿದೆ.
ಹೆಜ್ಜೇನು ದಾಳಿಯ ಪರಿಣಾಮ ಒಬ್ಬಳು ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಆಕೆಗೆ ಹೆಚ್ಚಿನ ಚಿಕಿತ್ಸೆ ನೀಡಲು ಹಾಸನಕ್ಕೆ ರವಾನಿಸಲಾಗಿದೆ. ಉಳಿದ ವಿದ್ಯಾರ್ಥಿಗಳನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಚಿಕ್ಕಮಗಳೂರು ನಗರದ ಹೊರಹೊಲಯದ ಮೌಂಟೇನ್ ವ್ಯೂ ಕಾಲೇಜಿನಲ್ಲಿ ಈ ಘಟನೆ ನಡೆದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD



























