ಮುಂಬೈಯಲ್ಲಿ ರಸ್ತೆ ಅಪಘಾತ: ಉಡುಪಿಯ ಕಲ್ಮಾಡಿಯ ಯುವಕ ಸಾವು
22/11/2025
ಉಡುಪಿ: ಮುಂಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಉಡುಪಿ ಜಿಲ್ಲೆಯ ಕಲ್ಮಾಡಿ ನಿವಾಸಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.
ಉಡುಪಿಯ ಕಲ್ಮಾಡಿ ನಿವಾಸಿ, 25 ವರ್ಷ ವಯಸ್ಸಿನ ಇನಿಶ್ ಲಸ್ರಾದೋ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಬೈಕ್ ಅಪಘಾತದಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮುಂಬೈನ ಥಾಣೆಯಲ್ಲಿ ಕಳೆದ ಮೂರು ವರ್ಷಗಳಿಂದ ಕಂಪೆನಿಯೊಂದರಲ್ಲಿ ಇನಿಶ್ ಕೆಲಸ ಮಾಡುತ್ತಿದ್ದರು. ಕಲ್ಮಾಡಿ ಚರ್ಚ್ ನ ಐಸಿವೈಎಂ ಘಟಕ ಮತ್ತು ವಿವಿಧ ಚರ್ಚ್ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD



























