ಭಾರತದ ಸಂವಿಧಾನ ಬಡವರ ರಕ್ಷಣಾ ಗುರಾಣಿ: ರಾಹುಲ್ ಗಾಂಧಿ
ನವದೆಹಲಿ: ಭಾರತದ ಸಂವಿಧಾನ ಬಡವರ ರಕ್ಷಣಾ ಗುರಾಣಿ ಎಂದು ಬಣ್ಣಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಂವಿಧಾನದ ಮೇಲೆ ಯಾವುದೇ ದಾಳಿಗೆ ಅವಕಾಶ ನೀಡುವುದಿಲ್ಲ ಎಂದು ಪ್ರತಿಜ್ಞೆ ಮಾಡುವಂತೆ ದೇಶದ ಜನರಿಗೆ ಕರೆ ನೀಡಿದ್ದಾರೆ.
ಸಂವಿಧಾನ ದಿನಾಚರಣೆಯ ಅಂಗವಾಗಿ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಅವರು, ಭಾರತದ ಸಂವಿಧಾನ ಕೇವಲ ಪುಸ್ತಕವಲ್ಲ, ದೇಶದ ಪ್ರತಿ ನಾಗರಿಕನಿಗೂ ನೀಡಿದ ಪವಿತ್ರ ವಾಗ್ದಾನವಾಗಿದೆ. ಯಾವುದೇ ಪ್ರದೇಶ, ಭಾಷೆ, ಬಡವ, ಶ್ರೀಮಂತ ಎಲ್ಲರಿಗೂ ಸಮಾನತೆ, ಗೌರವ ಮತ್ತು ನ್ಯಾಯದ ಭರವಸೆ ನೀಡಿದೆ. ಅದನ್ನು ರಕ್ಷಿಸುವುದು ನಮ್ಮ ಕರ್ತವ್ಯ ಎಂದರು.
ಸಂವಿಧಾನವು ಬಡವರು ಮತ್ತು ಸಮಾಜದ ಅಂಚಿನಲ್ಲಿರುವ ಪ್ರತಿಯೊಬ್ಬ ನಾಗರಿಕನ ರಕ್ಷಣಾ ಗುರಾಣಿ. ಅದು ಜನರ ಶಕ್ತಿ ಮತ್ತು ಧ್ವನಿಯಾಗಿದೆ ಎಂದು ಅವರು ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD



























