ಪೋಕ್ಸೋ ಕೇಸ್: ಮೊದಲ ಪ್ರಕರಣದಲ್ಲಿ ಮುರುಘಾ ಶರಣ ಮತ್ತು ಇಬ್ಬರು ಆರೋಪಿಗಳು ನಿರ್ದೋಷಿಗಳು!
ಚಿತ್ರದುರ್ಗ: ಪೋಸ್ಕೊ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೂರ್ತಿ ಮುರುಘಾ ಶರಣ ಹಾಗೂ ಇತರ ಇಬ್ಬರು ಆರೋಪಿಗಳು ನಿರ್ದೋಷಿಗಳು ಎಂದು ನಗರದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸಿವಿಲ್ ನ್ಯಾಯಾಲಯ ಬುಧವಾರ ಆದೇಶ ಪ್ರಕಟಿಸಿದೆ.
2 ಪೋಕ್ಸೋ ಪ್ರಕರಣಗಳ ಪೈಕಿ ಮೊದಲ ಪ್ರಕರಣದ ವಿಚಾರಣೆ ಪೂರ್ಣಗೊಂಡಿತ್ತು. ನ್ಯಾಯಾಧೀಶರಾದ ಚನ್ನಬಸಪ್ಪ ಜಿ. ಹಡಪದ ಆದೇಶ ಪ್ರಕಟಿಸಿದರು. ಇನ್ನೊಂದು ಪ್ರಕರಣದ ವಿಚಾರಣೆಗೆ ಬಾಕಿ ಇದ್ದು, ಸದ್ಯ ಅದರ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿದೆ.
ಪೋಕ್ಸೋ ಪ್ರಕರಣದ ಆರೋಪಿಗಳು ದೋಷಮುಕ್ತರಾಗಿದ್ದಾರೆ ಎಂದು ನ್ಯಾಯಾಧೀಶರು ಒಂದು ಸಾಲಿನ ಆದೇಶ ಪ್ರಕಟಿಸಿದರು. ಸುಪ್ರೀಂ ಕೋರ್ಟ್ ಸೂಚನೆ ಮೇರೆಗೆ ಇಬ್ಬರು ಸಂತ್ರಸ್ತೆಯರು, ಮೂವರು ಆರೋಪಿಗಳು ಹಾಗೂ 14 ಸಾಕ್ಷಿಗಳ ಸುದೀರ್ಘ ವಿಚಾರಣೆ ನಡೆದಿತ್ತು. ನ.18ರಂದು ಸಂತ್ರಸ್ತೆಯರ ಪರ ಸರ್ಕಾರಿ ವಕೀಲ ಎಚ್.ಆರ್.ಜಗದೀಶ್ ವಾದ ಮಾಡಿದ್ದರು. ಆರೋಪಿಗಳ ಪದ ಸಿ.ವಿ.ನಾಗೇಶ್ ವಾದ ಮಾಡಿದ್ದರು. ನ್ಯಾಯಾಧೀಶರು ನ.26ಕ್ಕೆ ಆದೇಶ ಕಾಯ್ದಿರಿಸಿದ್ದರು.
ಬುಧವಾರ ಬೆಳಿಗ್ಗೆ 10 ಗಂಟೆಗೆ ಆರೋಪಿಗಳಾದ ಶಿವಮೂರ್ತಿ ಶರಣ, ಮಠದ ವ್ಯವಸ್ಥಾಪಕ ಪರಮಶಿವಯ್ಯ, ವಾರ್ಡನ್ ರಶ್ಮಿ ಹಾಜರಾಗಿದ್ದರು. ನ್ಯಾಯಾಧೀಶರು ಮಧ್ಯಾಹ್ನ 2: 45ಕ್ಕೆ ಮುಂದೂಡಿದ್ದರು. ಮಧ್ಯಾಹ್ನ 3 ಗಂಟೆ ವೇಳೆಗೆ ನ್ಯಾಯಾಧೀಶರು ಆದೇಶ ಪ್ರಕಟಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD


























