ಉಡುಪಿ ಕೃಷ್ಣಮಠಕ್ಕೆ ನಾಳೆ ಪ್ರಧಾನಿ ಮೋದಿ ಭೇಟಿ: ಕನ್ನಡದಲ್ಲೇ ಟ್ವೀಟ್ ಮಾಡಿದ ಪ್ರಧಾನಿ - Mahanayaka

ಉಡುಪಿ ಕೃಷ್ಣಮಠಕ್ಕೆ ನಾಳೆ ಪ್ರಧಾನಿ ಮೋದಿ ಭೇಟಿ: ಕನ್ನಡದಲ್ಲೇ ಟ್ವೀಟ್ ಮಾಡಿದ ಪ್ರಧಾನಿ

pm modi
27/11/2025

ಉಡುಪಿ: ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಪ್ರಧಾನಿ ನರೇಂದ್ರ ಮೋದಿ  ನವೆಂಬರ್ 28ರಂದು ಆಗಮಿಸಲಿದ್ದಾರೆ. ಶುಕ್ರವಾರದಂದು ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದು, ಕನಕದಾಸರಿಗೆ ಪುಷ್ಪಾರ್ಚನೆ ಮಾಡಿ ಬಳಿಕ ಕನಕನ ಕಿಂಡಿಗೆ ಹೊದಿಸಿರುವ ಚಿನ್ನದ ಕವಚ, ಸುವರ್ಣ ತೀರ್ಥ ಮಂಟಪವನ್ನು ಅನಾವರಣಗೊಳಿಸಲಿದ್ದಾರೆ.

ಇನ್ನೂ ಉಡುಪಿಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಕನ್ನಡದಲ್ಲಿಯೇ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು,  ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನಗೆ ಗೌರವದ ವಿಷಯ. ಗೀತಾ ಪಠಣಕ್ಕಾಗಿ ಸಮಾಜದ ವಿವಿಧ ವರ್ಗಗಳ ಜನರನ್ನು ಒಂದೆಡೆ ಸೇರಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ. ಈ ಮಠವು ನಮ್ಮ ಸಾಂಸ್ಕೃತಿಕ ಜೀವನದಲ್ಲಿ ಅತ್ಯಂತ ವಿಶೇಷ ಮಹತ್ವವನ್ನು ಹೊಂದಿದೆ. ಶ್ರೀ ಮಧ್ವಾಚಾರ್ಯರಿಂದ ಪ್ರೇರಿತವಾದ ಈ ಮಠವು, ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ ಎಂದಿದ್ದಾರೆ.

ಪ್ರಧಾನಿ ಮೋದಿಯವರ ಮಠಭೇಟಿ ಹಿನ್ನೆಲೆ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಉಡುಪಿಯ ವಿವಿಧ ಸ್ಥಳಗಳಲ್ಲಿ ವಾಹನ ಸಂಚಾರವನ್ನು ನಿಷೇಧಿಸಿ ಬದಲಿ ವ್ಯವಸ್ಥೆ ಮಾಡಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ