ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಪೋಸ್ಟರ್ ವಾರ್?: ಡಿಕೆಶಿ ಸ್ಟೈಲ್ ನಲ್ಲೇ ಸಿದ್ದರಾಮಯ್ಯ ಪ್ರತ್ಯುತ್ತರ
ಬೆಂಗಳೂರು: ಆಡಿದ ಮಾತಿನಂತೆ ನಡೆದುಕೊಳ್ಳಬೇಕು ಅಂತ ಟ್ವೀಟ್ ಮಾಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಸಿಎಂ ಸಿದ್ದರಾಮಯ್ಯ ಪರೋಕ್ಷ ಪ್ರತಿಕ್ರಿಯೆ ನೀಡಿದ್ದಾರೆ. ಇದೀಗ ಸಿಎಂ ಸ್ಥಾನಕ್ಕಾಗಿ ಪೋಸ್ಟರ್ ವಾರ್ ಆರಂಭಗೊಂಡಿದ್ದು, ಡಿಕೆಶಿ ಆರಂಭಿಸಿದ ಪೋಸ್ಟರ್ ವಾರ್ ಗೆ ಅವರದ್ದೇ ಶೈಲಿಯಲ್ಲಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಡಿಕೆಶಿ ಟ್ವೀಟ್:
ವರ್ಡ್ ಪವರ್ ಈಸ್ ವರ್ಲ್ಡ್ ಪವರ್, ಅದು ನ್ಯಾಯಾಧೀಶರಾಗಿರಲಿ, ಅಧ್ಯಕ್ಷರಾಗಿರಲಿ ಅಥವಾ ನಾನೂ ಸೇರಿದಂತೆ ಯಾರೇ ಆಗಿರಲಿ, ಆಡಿದ ಮಾತಿನಂತೆ ನಡೆದುಕೊಳ್ಳಬೇಕು ಎಂದು ಯಾರನ್ನೂ ಉಲ್ಲೇಖಿಸದೇ ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಟ್ವೀಟ್ ಮಾಡಿದ್ದರು. ಸಿಎಂ ಸ್ಥಾನಕ್ಕಾಗಿ ನಡೆಸಲಾದ ಒಪ್ಪಂದದ ಬಗ್ಗೆ ಡಿಕೆಶಿ ಈ ಟ್ವೀಟ್ ಮಾಡಿದ್ದಾರೆ ಎಂದು ವ್ಯಾಪಕವಾಗಿ ವೈರಲ್ ಆಗಿತ್ತು.
ಸಿದ್ದರಾಮಯ್ಯ ತಿರುಗೇಟು:
ಡಿ.ಕೆ.ಶಿವಕುಮಾರ್ ಅವರ ಟ್ವೀಟ್ ಗೆ ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ತಮ್ಮ ಮಹತ್ವಾಕಾಂಕ್ಷಿ ಗ್ಯಾರೆಂಟಿ ಯೋಜನೆಯ ಯಶಸ್ವಿಯ ಬಗ್ಗೆ ಟ್ವೀಟ್ ಮಾಡಿದ್ದಾರೆ. ಅದರಲ್ಲಿ ಡಿಕೆಶಿಗೆ ಟಾಂಗ್ ನೀಡಿದ್ದು, “ಒಂದು ಮಾತು ಜಗತ್ತಿಗೆ ಉತ್ತಮವಾಗದ ಹೊರತು ಅದು ಶಕ್ತಿಯಲ್ಲ” ಕರ್ನಾಟಕದ ಜನರು ನೀಡಿದ ಜನಾದೇಶವು ಒಂದು ಕ್ಷಣದ್ದಲ್ಲ, ಆದರೆ ಐದು ಪೂರ್ಣ ವರ್ಷಗಳ ಜವಾಬ್ದಾರಿ. ನಾನು ಸೇರಿದಂತೆ ಕಾಂಗ್ರೆಸ್ ಪಕ್ಷವು ನಮ್ಮ ಜನರ ಪರವಾಗಿ ಸಹಾನುಭೂತಿ, ಸ್ಥಿರತೆ ಮತ್ತು ಧೈರ್ಯದಿಂದ ನಡೆದುಕೊಳ್ಳುತ್ತಿದೆ. ಕರ್ನಾಟಕಕ್ಕೆ ನಮ್ಮ ಮಾತು ಒಂದು ಘೋಷಣೆಯಲ್ಲ, ಅದು ನಮಗೆ ಜಗತ್ತನ್ನು ಅರ್ಥೈಸುತ್ತದೆ ಎಂದು ಡಿ.ಕೆ.ಶಿವಕುಮಾರ್ ಅವರಿಗೆ ಪರೋಕ್ಷ ಉತ್ತರ ನೀಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD

























