1ರಿಂದ 9ನೇ ತರಗತಿವರೆಗೆ ಪರೀಕ್ಷೆ ಇದೆಯೇ? | ಅಂತಿಮ ನಿರ್ಧಾರ ಏನಾಗಲಿದೆ? |  ಶಿಕ್ಷಣ ಸಚಿವರು ಹೇಳಿದ್ದೇನು? - Mahanayaka

1ರಿಂದ 9ನೇ ತರಗತಿವರೆಗೆ ಪರೀಕ್ಷೆ ಇದೆಯೇ? | ಅಂತಿಮ ನಿರ್ಧಾರ ಏನಾಗಲಿದೆ? |  ಶಿಕ್ಷಣ ಸಚಿವರು ಹೇಳಿದ್ದೇನು?

suresh kumar
17/04/2021


Provided by

ಚಿಕ್ಕಮಗಳೂರು: 1ರಿಂದ 9ನೇ ತರಗತಿಗಳಿಗೆ ಪರೀಕ್ಷೆ ನಡೆಸಬೇಕೋ ಅಥವಾ ಅವರನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡಬೇಕೋ ಎಂಬ ಬಗ್ಗೆ ರಾಜ್ಯ ಶಿಕ್ಷಣ ಇಲಾಖೆ ತೀವ್ರ ಗೊಂದಲದಲ್ಲಿದೆ. ಈ ನಡುವೆ ಹೇಳಿಕೆ ನೀಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್,  ಇನ್ನೆರಡು ದಿನಗಳಲ್ಲಿ 1ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಚಿಕ್ಕಮಗಳೂರಿನಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು,  ಅಧಿಕಾರಿಗಳ ಜೊತೆಗೆ ಚರ್ಚಿಸಿ ಕ್ರಮಕೈಗೊಳ್ಳಲಾಗುತ್ತದೆ. ಸಂಬಂಧಪಟ್ಟವರನ್ನು ಕರೆದು ಚರ್ಚಿಸಲಾಗಿದೆ. ಸದ್ಯ ಚರ್ಚೆ ಒಂದು ಹಂತಕ್ಕೆ ಬಂದಿದೆ. ಇನ್ನೆರಡು ದಿನಗಳಲ್ಲಿ ಶಿಕ್ಷಣ ಇಲಾಖೆ ಈ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

ಕೆಲವು ರಾಜ್ಯಗಳಲ್ಲಿ 10 ಹಾಗೂ 12ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ. ಕರ್ನಾಟಕದಲ್ಲಿ  ಎಸೆಸೆಲ್ಸಿ ಪರೀಕ್ಷೆ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ಸರ್ಕಾರ ತೀರ್ಮಾನ ಕೈಗೊಂಡಿದೆ. ವೇಳಾಪಟ್ಟಿ ಕೂಡ ಪ್ರಕಟಿಸಿದೆ. ಆದರೆ 1ರಿಂದ 9ನೇ ತರಗತಿ ಪರೀಕ್ಷೆಯ ಬಗ್ಗೆ ಎರಡು ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂಬ ವಿಶ್ವಾಸವನ್ನು ಸುರೇಶ್ ಕುಮಾರ್ ಅವರು ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ