ದಿನಾಂಕ ಘೋಷಿಸದೇ ದಿಢೀರ್ ಮುಷ್ಕರಕ್ಕೆ ಸಾರಿಗೆ ನೌಕರರಿಂದ ಸಿದ್ಧತೆ!?
Karnataka Bus Strike News: ಬೆಂಗಳೂರು: KSRTC, BMTC ಸೇರಿದಂತೆ ನಾಲ್ಕು ನಿಗಮಗಳ ನೌಕರರು ಮತ್ತೆ ಸಾರಿಗೆ ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಬಾರಿ ಹಠಾತ್ ಮುಷ್ಕರ ಮಾಡುವ ಮೂಲಕ ಸಾರಿಗೆ ನೌಕರರು ಸರ್ಕಾರಕ್ಕೆ ಬಿಸಿಮುಟ್ಟಿಸಲಿದ್ದಾರೆ ಎಂದು ವರದಿಗಳಿಂದ ತಿಳಿದು ಬಂದಿದೆ.
ಅಂದ ಹಾಗೆ ಆಗಸ್ಟ್ 5ರಂದು ನಾಲ್ಕು ನಿಗಮಗಳ ನೌಕರರು ಮುಷ್ಕರಕ್ಕೆ ಮುಂದಾಗಿದ್ದರು. ಆದ್ರೆ ಹೈಕೋರ್ಟ್ ಆದೇಶದ ಹಿನ್ನೆಲೆ ಮಷ್ಕರ ಹಿಂದಕ್ಕೆ ಪಡೆಯಲಾಗಿತ್ತು. ಇದೀಗ ಹಠಾತ್ ಮುಷ್ಕರ ನಡೆಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ಹಠಾತ್ ಮುಷ್ಕರದಿಂದ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗಲಿದೆ, ಸಾರಿಗೆ ನೌಕರರ ಬೇಡಿಕೆಗಳ ಸಂಬಂಧ ಶನಿವಾರ ಸಾರಿಗೆ ಸಚಿವರ ಜೊತೆಗೆ ಸಭೆ ನಡೆದಿತ್ತು. ಆದರೆ, ಬೇಡಿಕೆಗಳ ಈಡೇರಿಕೆ ಸಂಬಂಧ ಒಮ್ಮತಕ್ಕೆ ಬಾರದ ಹಿನ್ನೆಲೆ ಪ್ರತಿಭಟನೆಗೆ ಮುಂದಾಗಲಿದ್ದಾರೆ ಎಂದು ಹೇಳಲಾಗಿದೆ.
ಸಿಎಂ ಜೊತೆಗೆ ಈವರೆಗೆ ಸುಮಾರು ನಾಲ್ಕು ಸುತ್ತಿನ ಸಭೆ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಜೊತೆಗೆ ಮೂರು ಸುತ್ತಿನ ಮಾತುಕತೆ ನಡೆಸಲಾಗಿದ್ದರೂ, ವೇತನ ಹೆಚ್ಚಳ ಸಹಿತ ಬಾಕಿ ವೇತನ ನೀಡಲು ಸರ್ಕಾರ ಮುಂದಾಗಿಲ್ಲ, ಹೀಗಾಗಿ ಇದೀಗ ಸಾರಿಗೆ ನೌಕರರು ಬುಧವಾರದಿಂದ ಮತ್ತೆ ರಾಜ್ಯದ ಎಲ್ಲಾ ಬಸ್ ಡಿಪೋಗಳಿಗೆ ಭೇಟಿ ನೀಡಿ ಮುಷ್ಕರಕ್ಕೆ ಸಿದ್ದರಾಗಲು ಮನವಿ ಮಾಡಲಿದ್ದಾರೆ ಅಂತ ತಿಳಿದು ಬಂದಿದೆ.
ಈ ಬಾರಿ ದಿನಾಂಕವೇ ನಿಗದಿ ಪಡಿಸದೇ ಮುಷ್ಕರ ಮಾಡಲು ಪ್ಲಾನ್ ಮಾಡಲಾಗಿದೆ. ಕಾರ್ಮಿಕ ಇಲಾಖೆಗೆ ಮುಷ್ಕರದ ನೋಟಿಸ್ ಕೂಡ ನೀಡದೆ ಏಕಾಏಕಿ ಬಸ್ಸುಗಳ ಸಂಚಾರ ನಿಲ್ಲಿಸಲು ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ. ಮುಂದಿನ ನಡೆಯೇನು ಎನ್ನುವ ಬಗ್ಗೆ ಕಾದುನೋಡಬೇಕಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD



























