ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು
ಉಜಿರೆ (ದಕ್ಷಿಣ ಕನ್ನಡ): ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿಗಳು ಎರಡನೇ ಬಾರಿಗೆ ಆದೇಶ ಹೊರಡಿಸಿದ್ದಾರೆ.
ಪ್ರಕರಣದ ಹಿನ್ನೆಲೆ: ಈ ಹಿಂದೆ ತಿಮರೋಡಿ ಅವರನ್ನು ಗಡಿಪಾರು ಮಾಡಲಾಗಿತ್ತು. ಆದರೆ, ಅವರು ಈ ಆದೇಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್, ಆದೇಶವನ್ನು ಮರುಪರಿಶೀಲಿಸುವಂತೆ ಸೂಚಿಸಿತ್ತು. ಇದೀಗ ಹೈಕೋರ್ಟ್ ನಿರ್ದೇಶನದಂತೆ ಪ್ರಕರಣವನ್ನು ಮರುಪರಿಶೀಲಿಸಿದ ಅಧಿಕಾರಿಗಳು, ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿಗೆ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಡಿಸೆಂಬರ್ 17ರಂದು ಹೊಸ ಆದೇಶ ಹೊರಡಿಸಿದ್ದಾರೆ.
ಪೊಲೀಸ್ ಭೇಟಿ: ಗಡಿಪಾರು ಆದೇಶದ ಪ್ರತಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ತಲುಪಿದ್ದು, ಪೊಲೀಸರು ಗುರುವಾರ ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ಅವರ ಮನೆಗೆ ನೋಟಿಸ್ ನೀಡಲು ತೆರಳಿದ್ದರು. ಆದರೆ, ಈ ಸಂದರ್ಭದಲ್ಲಿ ತಿಮರೋಡಿ ಅವರು ಮನೆಯಲ್ಲಿ ಇರಲಿಲ್ಲ ಎಂದು ತಿಳಿದುಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD


























