ಪ್ರೀತಿಸುವಂತೆ ಕಾಟ: ಜೆಡಿಎಸ್ ಸ್ಥಳೀಯ ನಾಯಕಿಯ ಪುತ್ರನ ಕಿರುಕುಳಕ್ಕೆ ಯುವತಿ ಆತ್ಮಹತ್ಯೆ - Mahanayaka

ಪ್ರೀತಿಸುವಂತೆ ಕಾಟ: ಜೆಡಿಎಸ್ ಸ್ಥಳೀಯ ನಾಯಕಿಯ ಪುತ್ರನ ಕಿರುಕುಳಕ್ಕೆ ಯುವತಿ ಆತ್ಮಹತ್ಯೆ

karavara
10/01/2026

ಕಾರವಾರ: ಜೆಡಿಎಸ್ ಸ್ಥಳೀಯ ನಾಯಕಿಯೊಬ್ಬರ ಮಗನ ಕಿರುಕುಳಕ್ಕೆ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕದ್ರಾ ಗ್ರಾಮದಲ್ಲಿ ನಡೆದಿದೆ.

ಘಟನೆಯ ವಿವರ: ಕದ್ರಾ ಗ್ರಾಮದ ಕೆಪಿಸಿಎಲ್ ಕಾಲೋನಿ ನಿವಾಸಿ ರಿಶಾಲ್ ಡಿಸೋಜಾ (20) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಜೆಡಿಎಸ್ ಸ್ಥಳೀಯ ನಾಯಕಿ ಚೈತ್ರಾ ಕೋಠಾರಕರ್ ಎಂಬುವವರ ಪುತ್ರ ಚಿರಾಗ್, ರಿಶಾಲ್‌ಗೆ ಕಳೆದ ಕೆಲವು ದಿನಗಳಿಂದ ಪ್ರೀತಿಸುವಂತೆ ಪೀಡಿಸುತ್ತಿದ್ದ ಎನ್ನಲಾಗಿದೆ.

ಯುವತಿಯ ಮನೆ ಬಳಿ ಬಂದು ಪೀಡಿಸುತ್ತಿದ್ದ ಚಿರಾಗ್, ಆಕೆ ಪ್ರೀತಿಯನ್ನು ನಿರಾಕರಿಸಿದಾಗ “ಬೇಗ ಸತ್ತು ಹೋಗು” ಎಂದು ಮಾನಸಿಕವಾಗಿ ಹಿಂಸೆ ನೀಡಿದ್ದ ಎನ್ನಲಾಗಿದೆ. ಇದರಿಂದ ತೀವ್ರವಾಗಿ ನೊಂದ ರಿಶಾಲ್ ತನ್ನ ಮನೆಯಲ್ಲೇ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾಳೆ.

ಪೊಲೀಸ್ ದೂರು: ಮೃತ ಯುವತಿಯ ತಂದೆ ಕ್ರಿಸ್ತೋದ್ ಫ್ರಾನ್ಸಿಸ್ ಅವರು ನೀಡಿದ ದೂರಿನ ಮೇರೆಗೆ ಕದ್ರಾ ಪೊಲೀಸ್ ಠಾಣೆಯಲ್ಲಿ ಆರೋಪಿ ಚಿರಾಗ್ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

 

ಸಹಾಯವಾಣಿ: ಆತ್ಮಹತ್ಯೆ ಯಾವುದೇ ಸಮಸ್ಯೆಗೆ ಪರಿಹಾರವಲ್ಲ. ನಿಮಗೆ ಅಥವಾ ನಿಮ್ಮ ಆಪ್ತರಿಗೆ ಯಾವುದೇ ಮಾನಸಿಕ ಒತ್ತಡವಿದ್ದಲ್ಲಿ ಈ ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ: ಆರೋಗ್ಯ ಸಹಾಯವಾಣಿ: 104, ಸಹಾಯ: 080–25497777


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ