ಬಿಜೆಪಿ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆ: ಸ್ಮೃತಿ ಇರಾನಿ, ವಸುಂಧರಾ ರಾಜೆಗೆ ಪ್ರಮುಖ ಜವಾಬ್ದಾರಿ
ನವದೆಹಲಿ: ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸೋಮವಾರ ತನ್ನ ರಾಷ್ಟ್ರೀಯ ಪದಾಧಿಕಾರಿಗಳ ನೂತನ ಪಟ್ಟಿಯನ್ನು ಪ್ರಕಟಿಸಿದೆ. ಈ ಹೊಸ ತಂಡದಲ್ಲಿ ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹಾಗೂ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಸಿಂಧಿಯಾ ಸೇರಿದಂತೆ ಹಲವು ಪ್ರಮುಖ ನಾಯಕರಿಗೆ ಪಕ್ಷದ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನೀಡಲಾಗಿದೆ.
ಸ್ಮೃತಿ ಇರಾನಿ ಉತ್ತರ ಪ್ರದೇಶದಿಂದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ (National General Secretary) ನೇಮಕಗೊಂಡಿದ್ದಾರೆ.
ವಸುಂಧರಾ ರಾಜೇ ಸಿಂಧಿಯಾ ರಾಜಸ್ಥಾನದಿಂದ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷೆಯಾಗಿ (National Vice President) ತಮ್ಮ ಜವಾಬ್ದಾರಿಯನ್ನು ಮುಂದುವರಿಸಲಿದ್ದಾರೆ.
ಪಕ್ಷ ಬಿಡುಗಡೆ ಮಾಡಿರುವ ನೂತನ ಪದಾಧಿಕಾರಿಗಳ ಪಟ್ಟಿಯಲ್ಲಿ ದೇಶದ ವಿವಿಧ ಭಾಗಗಳ ಪ್ರಮುಖ ನಾಯಕರಾದ ತೀರತ್ ಸಿಂಗ್ ರಾವತ್, ಮನ್ಪ್ರೀತ್ ಸಿಂಗ್ ಬಾದಲ್, ರಾಮ್ ಮಾಧವ್, ಬೈಜಯಂತ್ ಜಯ ಪಾಂಡಾ, ಡಿ. ಪುರಂದೇಶ್ವರಿ ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಮುಂಬರುವ ಚುನಾವಣೆಗಳು ಹಾಗೂ ಪಕ್ಷದ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಬಿಜೆಪಿ ಕೇಂದ್ರ ನಾಯಕತ್ವವು ಈ ನೂತನ ಪದಾಧಿಕಾರಿಗಳ ತಂಡವನ್ನು ರಚಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD




























