ಕೊಟ್ಟಿಗೆಹಾರ: ಸೆಪ್ಟೆಂಬರ್ 6ಕ್ಕೆ ಪ್ರಾಜೆಕ್ಟ್ ಪಂಚತಂತ್ರ ನಾಟಕ ಪ್ರದರ್ಶನ
ಕೊಟ್ಟಿಗೆಹಾರ: ಕೆ.ಪಿ.ಪೂರ್ಣ ಚಂದ್ರ ತೇಜಸ್ವಿ ಅವರ 88 ನೇ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 6 ರಂದು ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ಪ್ರಾಜೆಕ್ಟ್ ಪಂಚತಂತ್ರ ನಾಟಕ ಪ್ರದರ್ಶನ ಮತ್ತು ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದೆ.
ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ವತಿಯಿಂದ ಕಾರ್ಯಕ್ರಮ ನಡೆಯಲಿದ್ದು ಅಂದು ಸಂಜೆ 5:30 ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ. ತೇಜಸ್ವಿ ಅವರ ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಿದ್ದ ಕರ್ವಾಲೊ ಕೃತಿ ಆಧಾರಿತ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ. ಮತ್ತು ಪ್ರಾಜೆಕ್ಟ್ ಪಂಚತಂತ್ರ ನಾಟಕ ಪ್ರದರ್ಶನ ನಡೆಯಲಿದೆ.
ನಾಟಕವನ್ನು ನಿರ್ದಿಗಂತ ತಂಡ ಪ್ರಸ್ತುತ ಪಡಿಸುತ್ತಿದ್ದು ಅರುಣ್ ಲಾಲ್ ಅವರು ನಿರ್ದೇಶಿಸಿದ್ದಾರೆ. ಪಂಚತಂತ್ರದ ಪುರಾತನ ಕಥೆಗಳು ಇಂದಿನ ಬದುಕಿನೊಂದಿಗೆ ಸಂವಾದಿಸುವ ವಿಶಿಷ್ಟ ರಂಗಪ್ರಯೋಗ ಇದಾಗಿದೆ. 15 ಕ್ಕೂ ಹೆಚ್ಚು ಕಥೆಗಳು ದೃಶ್ಯಕಾವ್ಯದ ಮೂಲಕ ಹೊಸ ರೂಪ ಪಡೆಯುತ್ತವೆ. ನಾಟಕಕ್ಕೆ ಪ್ರವೇಶ ಉಚಿತವಾಗಿದ್ದು ಹೆಚ್ಚಿನ ಮಾಹಿತಿಗೆ 966398873 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD



























