ತುಂಗಾ ನದಿಯಲ್ಲಿ ಫೋಟೋ ತೆಗೆಯಲು ಹೋಗಿ ಕಾಲು ಜಾರಿ ಬಿದ್ದು ಯುವಕ ಸಾವು
ಶೃಂಗೇರಿ: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಹಾಲಂದೂರು ಗ್ರಾಮದಲ್ಲಿ ನಡೆದ ದುರ್ಘಟನೆಯೊಂದರಲ್ಲಿ ತುಂಗಾ ನದಿಗೆ ಬಿದ್ದು ಯುವಕಯೊಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಪ್ರತಿಕ್ (30) ಎಂದು ಗುರುತಿಸಲಾಗಿದೆ. ಹಾಲಂದೂರು ಗ್ರಾಮದ ಬೆಣ್ಣೆ ಗುಡ್ಡದ ಬಳಿ ತುಂಗಾ ನದಿಯಂಚಿನಲ್ಲಿ ಫೋಟೋ ತೆಗೆಯಲು ತೆರಳಿದ್ದ ವೇಳೆ ಪ್ರತಿಕ್ ಕಾಲು ಜಾರಿ ನದಿಗೆ ಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ.
ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕನಿಗಾಗಿ ಶೋಧ ಕಾರ್ಯ ನಡೆಸಲಾಗಿತ್ತು. ಮುಳುಗು ತಜ್ಞ ಈಶ್ವರ್ ಮಲ್ಪೆ ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ನದಿಯಿಂದ ಮೃತದೇಹವನ್ನು ಹೊರತೆಗೆದಿದ್ದಾರೆ.
ಈ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD

























