ವಿದ್ಯಾರ್ಥಿನಿಯರ ಹಾಸ್ಟೆಲ್‌ ನಲ್ಲಿ ಒಣಗಲು ಹಾಕಿದ ಬಟ್ಟೆಗಳ ಕಳ್ಳತನ: ಆರೋಪಿಯ ಬಂಧನ - Mahanayaka
11:37 AM Thursday 10 - September 2026

ವಿದ್ಯಾರ್ಥಿನಿಯರ ಹಾಸ್ಟೆಲ್‌ ನಲ್ಲಿ ಒಣಗಲು ಹಾಕಿದ ಬಟ್ಟೆಗಳ ಕಳ್ಳತನ: ಆರೋಪಿಯ ಬಂಧನ

hostel
10/09/2026

ಸುಳ್ಯ:  ಬೆಳ್ಳಾರೆಯ ಸರಕಾರಿ ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆಗಳನ್ನು ಕಳ್ಳತನ ಮಾಡಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಬೆಳ್ಳಾರೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ ಘಟನೆ ವರದಿಯಾಗಿದೆ.

ಪುತ್ತೂರು ಕೊಳ್ತಿಗೆ ನಿವಾಸಿ ಕೆ.ರಾಮಚಂದ್ರ ಬಂಧಿತ ಆರೋಪಿ. ಸೆ.2ರಂದು ಬೆಳಗ್ಗೆ ವಿದ್ಯಾರ್ಥಿ ನಿಲಯದಲ್ಲಿ ಒಣಗಲು ಹಾಕಿದ ಬಟ್ಟೆಗಳು ಕಾಣೆಯಾಗಿದ್ದು, ಈ ಬಗ್ಗೆ ವಿದ್ಯಾರ್ಥಿಗಳು ವಾರ್ಡನ್ ಬಳಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ವಾರ್ಡನ್ ಸಂಸ್ಥೆಯ ಪರಿಸರದಲ್ಲಿದ್ದ ಸಿಸಿಟಿವಿ ಕ್ಯಾಮರಾವನ್ನು ಪರಿಶೀಲಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ.

ಅಪರಿಚಿತ ಯುವಕನೋರ್ವ ವಿದ್ಯಾರ್ಥಿ ನಿಲಯಕ್ಕೆ ಅತಿಕ್ರಮ ಪ್ರವೇಶ ಮಾಡಿ ವಿದ್ಯಾರ್ಥಿಗಳು ಒಣಗಿಸಲು ಹಾಕಿದ್ದ ಬಟ್ಟೆಗಳಲ್ಲಿ ಕೆಲವನ್ನು ಕದ್ದೊಯ್ಯುತ್ತಿರುವುದು ಕಂಡುಬಂದಿದೆ. ಈ ಘಟನೆಯ ಬಗ್ಗೆ ವಾರ್ಡನ್ ಸೆ.5 ರಂದು ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ನ್ಯಾಯಾಲಯವು ಸೆ.15ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

 ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti