ನ್ಯಾಯಾಲಯಕ್ಕೆ ನಕಲಿ ಆಧಾರ್ ಕಾರ್ಡ್ ಸಲ್ಲಿಕೆ: ಇಬ್ಬರು ಆರೋಪಿಗಳ ಬಂಧನ - Mahanayaka
12:25 PM Friday 11 - September 2026

ನ್ಯಾಯಾಲಯಕ್ಕೆ ನಕಲಿ ಆಧಾರ್ ಕಾರ್ಡ್ ಸಲ್ಲಿಕೆ: ಇಬ್ಬರು ಆರೋಪಿಗಳ ಬಂಧನ

umar farooq nishant kumar
11/09/2026

ಉಡುಪಿ: ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಪ್ರಕರಣವೊಂದಕ್ಕೆ ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ವಂಚನೆ ಎಸಗಲು ಯತ್ನಿಸಿದ ಆರೋಪದಡಿ ಇಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳದ ಉಮ್ಮರ್ ಫಾರೂಕ್ (32) ಹಾಗೂ ಮಂಗಳೂರಿನ ನಿಶಾಂತ್ ಕುಮಾರ್ (24) ಬಂಧಿತ ಆರೋಪಿಗಳು.

ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದ ನುಮಾನ್ ಎಂಬ ಆರೋಪಿಗೆ ಜಾಮೀನು ಒದಗಿಸುವ ಸಂದರ್ಭದಲ್ಲಿ, ಫಾರೂಕ್ ಹಾಗೂ ಪ್ರಶಾಂತ್ ಎಂಬವರ ಅಸಲಿ ಆಧಾರ್ ಕಾರ್ಡ್ ಸಂಖ್ಯೆಯನ್ನು ದುರ್ಬಳಕೆ ಮಾಡಿಕೊಳ್ಳಲಾಗಿತ್ತು. ಅದರಲ್ಲಿ ಕೆ.ಟಿ. ಮುಹಮ್ಮದ್ ಎಂಬವರ ಹೆಸರು ಮತ್ತು ವಿಳಾಸವನ್ನು ನಕಲಿಯಾಗಿ ಮುದ್ರಿಸಿ, ಅದನ್ನು ಅಸಲಿ ದಾಖಲೆಯಂತೆ ನ್ಯಾಯಾಲಯಕ್ಕೆ ಹಾಜರುಪಡಿಸಿ ವಂಚಿಸಲು ಯತ್ನಿಸಲಾಗಿದೆ.

ಈ ಕುರಿತು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆಡಳಿತಾಧಿಕಾರಿ ಅಬ್ಬಾಸ್ ಅವರು ನೀಡಿದ ದೂರಿನ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಉಡುಪಿ ನಗರ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಪಿ. ಅವರ ಮಾರ್ಗದರ್ಶನದಲ್ಲಿ, ಪಿಎಸ್ ಐ ರತ್ನಾಕರ ಕೆ. ನೇತೃತ್ವದ ವಿಶೇಷ ಪೊಲೀಸ್ ತಂಡವು ಕಾರ್ಯಾಚರಣೆ ನಡೆಸಿ ಇಬ್ಬರೂ ಆರೋಪಿಗಳನ್ನು ವಶಕ್ಕೆ ಪಡೆದಿದೆ. ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಈ ರೀತಿಯ ನಕಲಿ ದಾಖಲೆ ಸೃಷ್ಟಿ ಪ್ರಕರಣಗಳು ನ್ಯಾಯಾಂಗ ವ್ಯವಸ್ಥೆಗೆ ವಂಚನೆ ಎಸಗುವ ಗಂಭೀರ ಅಪರಾಧಗಳಾಗಿವೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti