ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ
20/09/2026
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಸಮೀಪದ ಸಾಣೂರು ಬಳಿ ಮಾಜಿ ಸಚಿವ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ಸೊಂದು ಡಿಕ್ಕಿ ಹೊಡೆದ ಘಟನೆ ಭಾನುವಾರ (ಸೆ. 20) ನಡೆದಿದೆ.
ಮಾಹಿತಿಯ ಪ್ರಕಾರ, ಕಾರ್ಕಳದಿಂದ ಮೂಡುಬಿದ್ರೆಯತ್ತ ಪಯಣಿಸುತ್ತಿದ್ದ ಬಸ್ ವೊಂದು, ಮಾಜಿ ಸಚಿವ ರಮಾನಾಥ ರೈ ಅವರು ತೆರಳುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ರಮಾನಾಥ ರೈ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ರಮಾನಾಥ ರೈ ಅವರ ಕಾರು ಚಾಲಕ ಹಾಗೂ ಅವರ ಪಿಎ ಗೆ ಗಾಯಗಳಾಗಿದ್ದು, ಅವರು ಕಾರ್ಕಳದ ಟಿಎಂಎ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.




























