ಬಣಕಲ್ ಬಳಿ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು
ಕೊಟ್ಟಿಗೆಹಾರ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಯಲ್ಲೇ ಪಲ್ಟಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ರಾಷ್ಟ್ರೀಯ ಹೆದ್ದಾರಿಯ ಚಂದನ್ ಕೆಫೆ ಸಮೀಪ ನಡೆದಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರು ಚಂದನ್ ಕೆಫೆ ಬಳಿ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮವಾಗಿ ಕಾರು ರಸ್ತೆಯ ಮೇಲೆ ಪಲ್ಟಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ಜಖಂಗೊಂಡಿದ್ದರೂ, ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.
ಕಾರಿನಲ್ಲಿದ್ದ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದುಬಂದಿದೆ.
“ಅತಿ ವೇಗ ಅಥವಾ ಚಾಲಕನ ಹಠಾತ್ ನಿಯಂತ್ರಣ ತಪ್ಪಿದ್ದೇ ಈ ಅಪಘಾತಕ್ಕೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ.”
ಈ ಘಟನೆಯು ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD



























