ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಆಸ್ಪತ್ರೆಗೆ ದಾಖಲು
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಜೆರುಸಲೆ ನ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದಾರೆ ಎಂದು ಅವರ ಕಚೇರಿ ಅಧಿಕೃತವಾಗಿ ಖಚಿತಪಡಿಸಿದೆ.
ಸ್ಥಳೀಯ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ ಪ್ರಧಾನಿ ಕಚೇರಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, 76 ವರ್ಷದ ನಾಯಕ ಬೆಂಜಮಿನ್ ನೆತನ್ಯಾಹು ಅವರು ಜೆರುಸಲೆಮ್ ನ ಹದಸ್ಸಾ ಐನ್ ಕೆರೆಮ್ ವೈದ್ಯಕೀಯ ಕೇಂದ್ರದಲ್ಲಿ (Hadassah Ein Kerem Medical Center) ದಂತ ಚಿಕಿತ್ಸೆಗೆ (Dental Treatment) ಒಳಗಾಗುತ್ತಿದ್ದಾರೆ ಎಂದು ತಿಳಿಸಿದೆ.
ಕಳೆದ ಕೆಲವು ತಿಂಗಳುಗಳಿಂದ ಪ್ರಧಾನಿ ನೆತನ್ಯಾಹು ಅವರ ಆರೋಗ್ಯದ ಬಗ್ಗೆ ಹಲವು ಚರ್ಚೆಗಳು ನಡೆಯುತ್ತಿವೆ. ಕಳೆದ ತಿಂಗಳು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದ್ದ ನೆತನ್ಯಾಹು, ತಮಗೆ ಪ್ರಾಸ್ಟೇಟ್ ಗಡ್ಡೆ ಇದ್ದಿದ್ದರಿಂದ ವಿಕಿರಣ ಚಿಕಿತ್ಸೆಗೆ (Radiation Therapy) ಒಳಗಾಗಿದ್ದಾಗಿ ಬಹಿರಂಗಪಡಿಸಿದ್ದರು. ಇರಾನ್ ಜೊತೆಗಿನ ಸಂಘರ್ಷದ ಸಮಯದಲ್ಲಿ ಎದುರಾಳಿಗಳು ಇದನ್ನು ಅಪಪ್ರಚಾರಕ್ಕೆ ಬಳಸಿಕೊಳ್ಳಬಹುದು ಎಂಬ ಕಾರಣಕ್ಕೆ ಈ ಮಾಹಿತಿಯನ್ನು ತಡವಾಗಿ ಬಹಿರಂಗಪಡಿಸಿರುವುದಾಗಿ ಅವರು ತಿಳಿಸಿದ್ದರು. ತದನಂತರ ತಾವು ಆರೋಗ್ಯವಾಗಿರುವುದಾಗಿಯೂ ಅವರು ಹೇಳಿದ್ದರು. ಪ್ರಸ್ತುತ ಅವರು ಪಡೆಯುತ್ತಿರುವ ದಂತ ಚಿಕಿತ್ಸೆಯ ಬಗ್ಗೆ ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD



























