ನಿರುದ್ಯೋಗಿ ಯುವಕ–ಯುವತಿಯರಿಗೆ ಕೆನರಾ ಬ್ಯಾಂಕ್ ನಿಂದ ಉಚಿತ ಫೋಟೋಗ್ರಫಿ ಹಾಗೂ ವಿಡಿಯೋಗ್ರಫಿ ತರಬೇತಿ | ಅರ್ಜಿ ಸಲ್ಲಿಸಲು ಜೂ.3 ಕೊನೆಯ ದಿನ
ಹೊಸಕೋಟೆ: ಸ್ವಯಂ ಉದ್ಯೋಗದ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಲು ಬಯಸುವ ನಿರುದ್ಯೋಗಿ ಯುವಕ-ಯುವತಿಯರಿಗೆ ಒಂದು ಸುವರ್ಣಾವಕಾಶ ಒದಗಿಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (RSETI) ವತಿಯಿಂದ ಜೂನ್ 3 ರಿಂದ ಆರಂಭವಾಗುವಂತೆ 31 ದಿನಗಳ ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.
ಏನೆಲ್ಲಾ ತರಬೇತಿ ನೀಡಲಾಗುವುದು?
ಈ ವೃತ್ತಿಪರ ಶಿಬಿರದಲ್ಲಿ ಕೇವಲ ಸಿದ್ಧಾಂತ ಮಾತ್ರವಲ್ಲದೆ, ಪ್ರಾಯೋಗಿಕವಾಗಿ (Practical) ಸಮಗ್ರ ಜ್ಞಾನವನ್ನು ನೀಡಲಾಗುತ್ತದೆ.
- ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಮೂಲಭೂತ ಅಂಶಗಳು.
- ಗಿಂಬಲ್ (Gimbal) ಹಾಗೂ ಡ್ರೋಣ್ (Drone) ಬಳಕೆ.
- ಮಾಡೆಲ್ ಫೋಟೋ ಶೂಟ್, ಪ್ರಾಡೆಕ್ಟ್ ಫೋಟೋಗ್ರಫಿ ಮತ್ತು ಔಟ್ಡೋರ್ ಫೋಟೋಶೂಟ್.
- ಸ್ಟುಡಿಯೋ ಸೆಟ್ ಅಫ್, ಪ್ರಿ-ವೆಡ್ಡಿಂಗ್ ಮತ್ತು ವೆಡ್ಡಿಂಗ್ ಶೂಟ್ ತಂತ್ರಗಳು.
- ಫೋಟೋ ಮತ್ತು ವಿಡಿಯೋ ಎಡಿಟಿಂಗ್, ಫೋಟೋಶಾಪ್ ಹಾಗೂ ಕರಿಷ್ಮಾ ಆಲ್ಬಂ ವಿನ್ಯಾಸ.
ಅರ್ಹತೆಗಳು ಮತ್ತು ಸೌಲಭ್ಯಗಳು:
- ವಯೋಮಿತಿ: 18 ರಿಂದ 50 ವರ್ಷದೊಳಗಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಮತ್ತು ಮಹಿಳೆಯರು ಭಾಗವಹಿಸಬಹುದು.
- ಆದ್ಯತೆ: ಗ್ರಾಮೀಣ ಭಾಗದ ಬಿಪಿಎಲ್ (BPL) ಕಾರ್ಡ್ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.
- ಭಾಷೆ: ಅಭ್ಯರ್ಥಿಗಳಿಗೆ ಸ್ಥಳೀಯ ಭಾಷೆ ತಿಳಿದಿರಬೇಕು ಹಾಗೂ ಕನ್ನಡ ಓದಲು ಮತ್ತು ಬರೆಯಲು ಬರಬೇಕು.
- ಉಚಿತ ಸೌಲಭ್ಯ: ತರಬೇತಿ ಅವಧಿಯಲ್ಲಿ ಶಿಬಿರಾರ್ಥಿಗಳಿಗೆ ಉಚಿತ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳನ್ನು ಸಂಸ್ಥೆಯೇ ಕಲ್ಪಿಸಲಿದೆ.
- ಪ್ರಮಾಣ ಪತ್ರ: ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಮಾನ್ಯತೆ ಪಡೆದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.
ಭಾಗವಹಿಸುವುದು ಹೇಗೆ?
ಆಸಕ್ತಿಯುಳ್ಳ ಅಭ್ಯರ್ಥಿಗಳು ದಿನಾಂಕ: 03/06/2026ರ ಬುಧವಾರ ಬೆಳಿಗ್ಗೆ 09.30 ಗಂಟೆಗೆ ತಮ್ಮ ವಿದ್ಯಾರ್ಹತೆ ಮತ್ತು ವಿಳಾಸದ ಅಸಲಿ ದಾಖಲಾತಿಗಳೊಂದಿಗೆ (Original Documents) ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ — ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬಹುದು.
ಹೆಸರು ನೋಂದಾಯಿಸಲು ಕೊನೆಯ ದಿನಾಂಕ: 03/06/2026 ರೊಳಗೆ ಅಭ್ಯರ್ಥಿಗಳು ಕೆಳಗಿನ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ ತಮ್ಮ ಹೆಸರನ್ನು ಮುಂಚಿತವಾಗಿ ನೋಂದಾಯಿಸಿಕೊಳ್ಳಬಹುದು ಎಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆಗಳು:
8970476050, 9591514154, 6363139123, 9686248369, 9505894247
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD


























