ಶೋಭಾ ಕರಂದ್ಲಾಜೆ ವಾಗ್ದಾಳಿ: “ರಾಜ್ಯದಲ್ಲಿ ಬ್ಲ್ಯಾಕ್​ ಮೇಲ್ ಸರ್ಕಾರ ಆಡಳಿತ ನಡೆಸುತ್ತಿದೆ” - Mahanayaka

ಶೋಭಾ ಕರಂದ್ಲಾಜೆ ವಾಗ್ದಾಳಿ: “ರಾಜ್ಯದಲ್ಲಿ ಬ್ಲ್ಯಾಕ್​ ಮೇಲ್ ಸರ್ಕಾರ ಆಡಳಿತ ನಡೆಸುತ್ತಿದೆ”

shobha karandlaje
19/10/2026

ಮೈಸೂರು: ರಾಜ್ಯದಲ್ಲಿ ಬ್ಲ್ಯಾಕ್ ​ಮೇಲ್ ಸರ್ಕಾರ ನಡೆಯುತ್ತಿದ್ದು, ಪಕ್ಷ ಹಾಗೂ ಸರ್ಕಾರದ ಒಳಗಡೆಯೇ ಬೆದರಿಕೆ ತಂತ್ರಗಳ ಆಡಳಿತ ನಡೆಯುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಬ್ಲ್ಯಾಕ್ ​ಮೇಲ್ ಮಾಡಿ ರಾಜೀನಾಮೆ ಕೊಡಿಸಲಾಗುತ್ತಿದೆ ಎಂಬ ಸುದ್ದಿ ರಾಜ್ಯಕ್ಕೆ ಕಪ್ಪು ಚುಕ್ಕೆ ಎಂದರು. ಅಧಿಕಾರಕ್ಕಾಗಿ ಸ್ಟಿಂಗ್ ಆಪರೇಷನ್ ನಡೆಸಿ ಬೆದರಿಸುವ ಈ ಸಿಡಿ ರಾಜಕಾರಣಕ್ಕೆ ಇತಿಶ್ರೀ ಹಾಡಬೇಕು. ಕೂಡಲೇ ಎಸ್‌ಐಟಿ ತನಿಖೆ ನಡೆಸಿ ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ವಿಧಿಸಬೇಕೆಂದು ಸಿಎಂ ಬಳಿ ಮನವಿ ಮಾಡಿದರು.

ಇದೇ ವೇಳೆ, ವಿಶ್ವವಿಖ್ಯಾತ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಅರಮನೆ ಆವರಣದಲ್ಲಿ ದಸರಾ ಆನೆಗಳ ಮಾವುತರು ಮತ್ತು ಕಾವಾಡಿಗರ ಕುಟುಂಬಗಳಿಗೆ ಉಪಹಾರ ಕೂಟ ಆಯೋಜಿಸಲಾಗಿತ್ತು. ತಾವೇ ಸ್ವತಃ ಉಪಹಾರ ಹಾಗೂ ಹೋಳಿಗೆ ಬಡಿಸಿದ ಶೋಭಾ ಕರಂದ್ಲಾಜೆ, ಆನೆಗಳಿಗೆ ಕಬ್ಬು ಮತ್ತು ಹಣ್ಣುಗಳನ್ನು ತಿನ್ನಿಸಿ ಸಂಭ್ರಮಿಸಿದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾವುತರು ಮತ್ತು ಕಾವಾಡಿಗರನ್ನು ಸರ್ಕಾರಿ ನೌಕರರನ್ನಾಗಿ ಮಾಡಲಾಗಿದೆ. ಇಂದು ಅವರ ಮಕ್ಕಳು ಉತ್ತಮ ಶಿಕ್ಷಣ ಪಡೆಯುತ್ತಿರುವುದು ಮತ್ತು ಕುಟುಂಬಗಳೊಂದಿಗೆ ಆನೆಗಳನ್ನು ಅತ್ಯಂತ ಜೋಪಾನವಾಗಿ ನೋಡಿಕೊಳ್ಳುತ್ತಿರುವುದು ಅತ್ಯಂತ ಸಂತೋಷದ ವಿಚಾರ ಎಂದು ಅವರು ಹರ್ಷ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಶಾಸಕ ಶ್ರೀವತ್ಸ ಹಾಗೂ ಇತರ ಬಿಜೆಪಿ ನಾಯಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

deneme bonusu veren siteler gamdom giriş deneme bonusu veren siteler