ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ ಸರ್ವೇಯರ್; ₹15 ಸಾವಿರ ಪಡೆಯುವಾಗ ಸಿಕ್ಕಿಬಿದ್ದ ಸುಮಾ!
ಚಿಕ್ಕಮಗಳೂರು: ಲಂಚದ ಹಣ ಪಡೆಯುತ್ತಿದ್ದ ವೇಳೆ ಸರ್ಕಾರಿ ಮಹಿಳಾ ಸರ್ವೇಯರ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಮೂಡಿಗೆರೆ ಪಟ್ಟಣದ ಎ.ಡಿ.ಎಲ್.ಆರ್. (ADLR) ಕಚೇರಿಯಲ್ಲಿ ನಡೆದಿದೆ.
ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದ ನಿವಾಸಿ ಮಂಜುನಾಥ್ ಎಂಬುವವರು ತಮ್ಮ ಜಮೀನಿನ ಸರ್ವೆ ನಡೆಸಿ ಸ್ಕೆಚ್ ಮಾಡಿಕೊಡುವಂತೆ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಈ ಕೆಲಸ ಮಾಡಿಕೊಡಲು ಸರ್ಕಾರಿ ಸರ್ವೇಯರ್ ಸುಮಾ ಅವರು 20 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಲಂಚ ನೀಡಲು ಇಷ್ಟವಿಲ್ಲದ ಮಂಜುನಾಥ್ ಅವರು ಈ ಕುರಿತು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ದೂರಿನನ್ವಯ ಲೋಕಾಯುಕ್ತ ಅಧಿಕಾರಿಗಳು ನಿನ್ನೆ ಎ.ಡಿ.ಎಲ್.ಆರ್. ಕಚೇರಿಯಲ್ಲಿ ತಪಾಸಣೆ ನಡೆಸಿದಾಗ, ಮಂಜುನಾಥ್ ಅವರಿಂದ 15 ಸಾವಿರ ರೂಪಾಯಿ ಲಂಚದ ಹಣವನ್ನು ಪಡೆಯುತ್ತಿದ್ದ ವೇಳೆ ಸರ್ವೇಯರ್ ಸುಮಾ ಅವರು ಲೋಕಾಯುಕ್ತರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಲೋಕಾಯುಕ್ತ ದಾಳಿ: ಲೋಕಾಯುಕ್ತ ಡಿವೈಎಸ್.ಪಿ ತಿರುಮಲೇಶ್ ಅವರ ನೇತೃತ್ವದ ತಂಡ ಈ ಯಶಸ್ವಿ ದಾಳಿ ನಡೆಸಿದ್ದು, ಆರೋಪಿ ಸುಮಾ ಅವರನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD



























