ಶಿಥಿಲಾವಸ್ಥೆಯ ಮನೆಯಲ್ಲಿ ಮತದಾನ ಮಾಡಿದ 104 ವರ್ಷದ ವೃದ್ಧೆ: ಅಧಿಕಾರಿಗಳಿಗೆ ಸಾರ್ವಜನಿಕರಿಂದ ತರಾಟೆ - Mahanayaka

ಶಿಥಿಲಾವಸ್ಥೆಯ ಮನೆಯಲ್ಲಿ ಮತದಾನ ಮಾಡಿದ 104 ವರ್ಷದ ವೃದ್ಧೆ: ಅಧಿಕಾರಿಗಳಿಗೆ ಸಾರ್ವಜನಿಕರಿಂದ ತರಾಟೆ

kudigi
03/05/2023

ಮಡಿಕೇರಿ:  ಕೊಡಗು ಜಿಲ್ಲೆಯ ಕೂಡಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಿಥಿಲಾವಸ್ಥೆಯ ಮನೆಯೊಂದರಲ್ಲಿ 104 ವರ್ಷ ವಯಸ್ಸಿನ ಮಹಿಳೆಯೊಬ್ಬರು ಮಂಗಳವಾರ ಮತದಾನ ಮಾಡಿದ್ದು, ಮತದಾನದ ಬೆನ್ನಲ್ಲೇ ಅಧಿಕಾರಿಗಳನ್ನು ಸಾರ್ವಜನಿಕರು ತರಾಟೆಗೆತ್ತಿಕೊಂಡಿದ್ದಾರೆ.


Provided by

104 ವರ್ಷದ ಕಾಳಮ್ಮ ಅವರು ಕುಸಿಯುವ ಹಂತದಲ್ಲಿದ್ದ ಮನೆಯಲ್ಲಿ ಮತದಾನ ಮಾಡಿದ್ದಾನೆ. ಈ ಬಗ್ಗೆ ಕೊಡಗು ಜಿಲ್ಲಾಧಿಕಾರಿ  ತನ್ನ ಫೇಸ್ ಬುಕ್ ಖಾತೆಯಲ್ಲಿ ಚಿತ್ರ ಹಂಚಿಕೊಂಡಿದ್ದರು. ಈ ಚಿತ್ರವನ್ನು ನೋಡಿದ ಸಾರ್ವಜನಿಕರು, ಇವರ ಮನೆಯ ಪರಿಸ್ಥಿತಿ ನೋಡಿ ಮತ ಹಾಕಿಸಿಕೊಳ್ಳಲು ನಿಮಗೆ ಹೇಗೆ ಮನಸ್ಸು ಬಂತು ಎಂದು ಜಿಲ್ಲಾಧಿಕಾರಿಯನ್ನು ತರಾಟೆಗೆತ್ತಿಕೊಂಡಿದ್ದಾರೆ.

ಇನ್ನೂ ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್, ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಮಹಿಳೆಯ ಮನೆಗೆ ತೆರಳಿದ್ದ ಅಧಿಕಾರಿಗಳ ಹೇಳಿಕೆ ಪ್ರಕಾರ, ಇವರು ತಾತ್ಕಾಲಿಕವಾಗಿ ಈ ಮನೆಯಲ್ಲಿ ವಾಸವಿದ್ದಾರೆ. ಈ ಮನೆಯ ಹಿಂದೆ ಬೇರೊಂದು ಮನೆ ಕಟ್ಟಿಸುತ್ತಿದ್ದಾರೆ. ಚುನಾವಣೆ ಮುಗಿದ ಮೇಲೆ ಈ ಬಗ್ಗೆ ಕೂಲಂಕುಷವಾಗಿ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ