ಜೋಕಾಲಿಯ ಹಗ್ಗ ಕೊರಳಿಗೆ ಸುತ್ತಿ 14 ವರ್ಷದ ಬಾಲಕ ಸಾವು! - Mahanayaka

ಜೋಕಾಲಿಯ ಹಗ್ಗ ಕೊರಳಿಗೆ ಸುತ್ತಿ 14 ವರ್ಷದ ಬಾಲಕ ಸಾವು!

kotresh
25/02/2024


Provided by

ದಾವಣಗೆರೆ: ಜೋಕಾಲಿಯ ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಬಾಲಕನೋರ್ವ ಸಾವನ್ನಪ್ಪಿದ ದಾರುಣ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ ಗ್ರಾಮದಲ್ಲಿ ನಡೆದಿದೆ.

ಪಿ.ಜೆ.ಕೊಟ್ರೇಶ್ (14) ಮೃತಪಟ್ಟ ಬಾಲಕನಾಗಿದ್ದಾನೆ.  ಈತ ಖಾಸಗಿ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ.  ಶಾಲೆ ಮುಗಿಸಿ ಮನೆಗೆ ಬಂದಿದ್ದ  ಕೊಟ್ರೇಶ್ ಜೋಕಾಲಿಯಲ್ಲಿ ಕುಳಿತು ಆಟವಾಡುತ್ತಿದ್ದ.

ಈ ವೇಳೆ ಜೋಕಾಲಿಯ ಹಗ್ಗ ಆಕಸ್ಮಿಕವಾಗಿ ಕೊರಳಿಗೆ ಸುತ್ತಿಕೊಂಡಿದ್ದು, ಬಾಲಕ ಉಸಿರುಗಟ್ಟಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ