ಆಟ ಅಭ್ಯಾಸ ಮಾಡುತ್ತಿದ್ದ ವೇಳೆ 14 ವರ್ಷದ ಬಾಲಕ ಹೃದಯಾಘಾತದಿಂದ ಸಾವು! - Mahanayaka

ಆಟ ಅಭ್ಯಾಸ ಮಾಡುತ್ತಿದ್ದ ವೇಳೆ 14 ವರ್ಷದ ಬಾಲಕ ಹೃದಯಾಘಾತದಿಂದ ಸಾವು!

mohith
01/12/2024


Provided by

ಅಲಿಗಢ:  ಕ್ರೀಡಾ ಸ್ಪರ್ಧೆಅಭ್ಯಾಸ ನಡೆಸುತ್ತಿದ್ದ ವೇಳೆ ಬಾಲಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯ ಸಿರೌಲಿ ಗ್ರಾಮದಲ್ಲಿ ನಡೆದಿದೆ.

14 ವರ್ಷದ ಮೋಹಿತ್ ಚೌದರಿ ಮೃತಪಟ್ಟ ಬಾಲಕನಾಗಿದ್ದಾನೆ. ಶಾಲೆಯಲ್ಲಿ ಏರ್ಪಡಿಸಿದ್ದ ಕ್ರೀಡಾ ಸ್ಪರ್ಧೆಗಾಗಿ ಬಾಲಕ ಅಭ್ಯಾಸ ಮಾಡುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ.

ಓಟದ ಅಭ್ಯಾಸದಲ್ಲಿ ನಿರತನಾಗಿದ್ದ ವೇಳೆ ಮೂರನೇ ಸುತ್ತು ಓಡುತ್ತಿದ್ದ ಮೋಹಿತ್ ಏಕಾಏಕಿ ಕುಸಿದು ಬಿದ್ದಿದ್ದಾನೆ. ತಕ್ಷಣವೇ  ಆತನ ಸ್ನೇಹಿತರು ಪೋಷಕರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಬಾಲಕನನ್ನು  ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಬಾಲಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ.

ಅಲಿಗಢದ ಅರಾನಾದಲ್ಲಿ  ಕಳೆದ 25 ದಿನಗಳಲ್ಲಿ ಮೂವರು  ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಅಲಿಗಢದ ಅರಾನಾದಲ್ಲಿ 20 ವರ್ಷದ ಯುವತಿ ಓದುತ್ತಿದ್ದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಳು. ಲೋಧಿ ನಗರದಲ್ಲಿ 8 ವರ್ಷದ ಬಾಲಕಿ ಆತವಾಡುತ್ತಿದ್ದಾಗ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಳು. ಇದೀಗ 14 ವರ್ಷದ ಬಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವುದು ಆತಂಕ ಸೃಷ್ಟಿಸಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ