ಆತಂಕ: ಕೇರಳದಲ್ಲಿ 14 ವರ್ಷದ ಬಾಲಕನಿಗೆ ನಿಫಾ ವೈರಸ್ ಸೋಂಕು

nipah virus
21/07/2024

ತಿರುವನಂತಪುರಂ: ಕೇರಳದಲ್ಲಿ ಮತ್ತೆ ನಿಫಾ ವೈರಸ್ ಭೀತಿ ಸೃಷ್ಟಿಯಾಗಿದ್ದು, ಮಲಪ್ಪುರಂನಲ್ಲಿ  14 ವರ್ಷದ ಬಾಲಕನಿಗೆ ನಿಫಾ ವೈರಸ್ ದೃಢಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.

ನಿಫಾ ವೈರಸ್ ಪತ್ತೆ ಹಿನ್ನೆಲೆ ವೈರಸ್ ಹರಡುವಿಕೆ ತಡೆಯಲು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಉನ್ನತ ಮಟ್ಟದ ಸಭೆ ನಡೆಸಿದ್ದು,  ಸಾರ್ವಜನಿಕ ಸುರಕ್ಷತೆಯನ್ನು ಖಾತರಿಪಡಿಸುವುದು, ಪ್ರಸ್ತುತ ಪರಿಸ್ಥಿತಿಯನ್ನು ಪರಿಶೀಲಿಸುವುದು ಮತ್ತು ನಿಯಂತ್ರಣದ ಕ್ರಮಗಳ ಬಗ್ಗೆ ಮಹತ್ವದ ಚರ್ಚೆ ನಡೆಸಲಾಯಿತು.

ಮಲಪ್ಪುರಂನಲ್ಲಿರುವ ಸರ್ಕಾರಿ ತಂಗುದಾಣದಲ್ಲಿ 24 ಗಂಟೆಗಳ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ.  ಸೋಂಕಿತ ಬಾಲಕನ ಸಂಪರ್ಕದಲ್ಲಿದ್ದವರ ಪಟ್ಟಿ ಸಿದ್ಧಪಡಿಸಲಾಗಿದೆ. ಹೆಚ್ಚಿನ ಅಪಾಯದ ಪ್ರದೇಶಗಳಲ್ಲಿರುವ ಜನರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲು ಕ್ರಮವಹಿಸಲಾಗಿದೆ. ಬಾಲಕನಿಗೆ ಸೋಂಕು ತಗುಲಿದ ಪ್ರದೇಶದ 3 ಕಿಮೀ ವ್ಯಾಪ್ತಿಯಲ್ಲಿ ನಿರ್ಬಂಧ ವಿಧಿಸಬೇಕೆ ಎಂಬ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ.

ವರದಿಗಳ ಪ್ರಕಾರ,  ಬಾಲಕನ ಸ್ಥಿತಿ ಗಂಭೀರವಾಗಿದೆ. ಆತನನ್ನು ಕೋಝಿಕ್ಕೋಡ್‌ ವೈದ್ಯಕೀಯ ಕಾಲೇಜಿಗೆ ವರ್ಗಾಯಿಸುವ ಸಾಧ್ಯತೆ ಇದೆ ಎನ್ನಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version