ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ 27 ವರ್ಷದ ಯುವಕ ಸಾವು - Mahanayaka

ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ 27 ವರ್ಷದ ಯುವಕ ಸಾವು

chikkamagaluru
27/11/2023


Provided by

ಚಿಕ್ಕಮಗಳೂರು: ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಯುವಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಪಟ್ಟಣಗೆರೆ ಗ್ರಾಮದಲ್ಲಿ ನಡೆದಿದೆ.

ಮೃತನನ್ನು 27 ವರ್ಷದ ಅಭಿಷೇಕ್ ಎಂದು ಗುರುತಿಸಲಾಗಿದೆ. ಮೃತ ಅಭಿಷೇಕ್ ಮೂರು ಎಕರೆ ಅಡಿಕೆ ತೋಟವಿತ್ತು. ತೋಟದಲ್ಲಿ ತೆಂಗಿನ ಮರಗಳು ಕೂಡ ಇದ್ದವು. ಭಾನುವಾರ ಸಂಜೆ ತೋಟದಲ್ಲಿ ತೆಂಗಿನಕಾಯಿ ಕೀಳಲು ಹೋದಾಗ ಈ ದುರ್ಘಟನೆ ಸಂಭವಿಸಿದೆ.

ತೋಟದಲ್ಲಿ ಒಂದು ಮರದಿಂದ ಮತ್ತೊಂದು ತೆಂಗಿನ ಮರದ ಬಳಿ ಹೋಗುವಾಗ ಅಲ್ಯುಮಿನಿಯಂ ಏಣಿಯನ್ನ ಎತ್ತಿಕೊಂಡು ಹೋಗುವಾಗ ಪ್ರೈಮರಿ ಲೈನ್ (11 ಸಾವಿರ ಕಿಲೋ ವ್ಯಾಟ್) ವಿದ್ಯುತ್ ತಂತಿಗೆ ಏಣಿ ತಗುಲಿ ಸಾವನ್ನಪ್ಪಿದ್ದಾನೆ.

ವಿದ್ಯುತ್ ಶಾಕ್ ನಿಂದ ತೋಟದಲ್ಲೇ ಬಿದ್ದಿದ್ದ ಅಭಿಷೇಕ್ ನನ್ನು ಕೂಡಲೇ ಕಡೂರು ತಾಲೂಕು ಆಸ್ಪತ್ರೆಗೆ ದಾಖಲಿಸಿದರು ಕೂಡ ತೀವ್ರವಾದಂತ ವಿದ್ಯುತ್ ಶಾಕ್ ನಿಂದ ಅಭಿಷೇಕ್ ಅಸುನೀಗಿದ್ದಾನೆ. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ