ಬಾಲಕಿಯನ್ನು ಬಲವಂತವಾಗಿ ಮದುವೆಯಾದ 40 ವರ್ಷದ ವ್ಯಕ್ತಿ ಅರೆಸ್ಟ್!
ಪಾಟ್ನಾ: 2 ಲಕ್ಷ ರೂಪಾಯಿ ಸಾಲವನ್ನು ಪಡೆದು ಮರುಪಾವತಿ ಮಾಡದ ಆರೋಪ ಹೊರಿಸಿ ಕುಟುಂಬವೊಂದರ ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಮದುವೆಯಾದ 40 ವರ್ಷದ ವ್ಯಕ್ತಿಯನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಬಾಲಕಿಯ ಪೋಷಕರು ಪಾಂಡೆಯಿಂದ ಸಾಲವಾಗಿ 2 ಲಕ್ಷ ರೂ. ಪಡೆದುಕೊಂಡಿದ್ದರು. ಆದರೆ, ಸಾಲವನ್ನು ಮರುಪಾವತಿಸಲು ಸಾಧ್ಯವಾಗಿರಲಿಲ್ಲ. ಆ ಕಾರಣದಿಂದಾಗಿ ಆರೋಪಿಯು ಬಾಲಕಿಯನ್ನು ಬಲವಂತವಾಗಿ ಮದುವೆಗಾಗಿದ್ದಾನೆ.
ಆರೋಪಿ ಮಹೇಂದ್ರ ಪಾಂಡೆ, ಸಿವಾನ್ ಜಿಲ್ಲೆಯ ಮೈರ್ವಾ ಲಕ್ಷ್ಮೀಪುರ ಗ್ರಾಮದ ನಿವಾಸಿಯಾಗಿದ್ದಾನೆ. ಆರೋಪಿಯು ಸಂತ್ರಸ್ತೆಯ ಕುಟುಂಬದ ದೂರದ ಸಂಬಂಧಿ ಎನ್ನಲಾಗಿದೆ.
ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಕ್ರಮಕೈಗೊಂಡಿದ್ದಾರೆ. ದೂರಿನ ಪ್ರಕಾರ, ಆರೋಪಿ ಪಾಂಡೆ 6 ನೇ ತರಗತಿ ವಿದ್ಯಾರ್ಥಿನಿಯನ್ನು ತನ್ನೊಂದಿಗೆ ಇರಿಸಿಕೊಳ್ಳುವಂತೆ ಮನೆಯವರ ಮನವೊಲಿಸಿದ್ದು ಸಂತ್ರಸ್ತೆಯ ವ್ಯಾಸಂಗಕ್ಕೆ ಅನುಕೂಲ ಮಾಡಿಕೊಡುವ ನೆಪದಲ್ಲಿ ರಹಸ್ಯವಾಗಿ ಮದುವೆಯಾಗಿದ್ದ ಎನ್ನಲಾಗಿದೆ.
ಆರೋಪಿ ಪಾಂಡೆಯನ್ನು ಬಂಧಿಸಿ, ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ಅವರು 14 ದಿನಗಳ ನ್ಯಾಯಾಂಗ ಬಂಧನ ವಿಧಿಲಾಗಿದೆ. ಬಾಲ್ಯ ವಿವಾಹ ಕಾಯ್ದೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ 2012 ರ ಸಂಬಂಧಿತ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸಂತ್ರಸ್ತೆ ಕಳೆದ ಮೂರು ತಿಂಗಳಿಂದ ಪಾಂಡೆ ಜೊತೆಯಲ್ಲಿದ್ದ ಕಾರಣ ವೈದ್ಯಕೀಯ ತಪಾಸಣೆ ನಡೆಸಲಾಗಿದ್ದು,ಆಕೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























