ಮಹಾಮಾರಿ ಡೆಂಗ್ಯೂಗೆ 6 ವರ್ಷದ ಬಾಲಕಿ ಬಲಿ

sania
29/06/2024

ಚಿಕ್ಕಮಗಳೂರು:  ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ತಾಂಡವವಾಡುತ್ತಿದೆ.  ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಬಾಲಕಿಯೊಬ್ಬಳು ಡೆಂಗ್ಯೂಗೆ ಬಲಿಯಾಗಿದ್ದಾಳೆ.

ಆರು ವರ್ಷದ ಬಾಲಕಿ ಸಾನಿಯಾ ಸಾವನ್ನಪ್ಪಿದ ಬಾಲಕಿಯಾಗಿದ್ದಾಳೆ. ಈಕೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ ಚಿಕಿತ್ಸೆ ಫಲಿಸದೇ ಬಾಲಕಿ ಸಾವನ್ನಪ್ಪಿದ್ದಾಳೆ.

ಬಾಲಕಿಯ ಮೃತದೇಹದ ಮುಂದೆ ನಿಂತು ತಂದೆ ಆಸಿಫ್ ಸರ್ಕಾರಕ್ಕೆ ವಿಶೇಷ ಮನವಿ ಮಾಡಿದ್ದು, ನನಗೆ ಯಾವುದೇ ಸಹಾಯ ಸರ್ಕಾರದಿಂದ ಬೇಡ. ಆದರೆ ಸರ್ಕಾರಿ ಆಸ್ಪತ್ರೆಗಳನ್ನ ಅಭಿವೃದ್ಧಿ ಮಾಡಿ ಎಂದು ಕೈಮುಗಿದು ಬೇಡಿಕೊಂಡಿದ್ದಾರೆ.

ಸರ್ಕಾರಿ ಆಸ್ಪತ್ರೆಗಳನ್ನ ಅಭಿವೃದ್ಧಿ ಮಾಡದಿದ್ದರೆ ಜನ ಛೀಮಾರಿ ಹಾಕುತ್ತಾರೆ.  ಡೆಂಗ್ಯೂ ಕಾಯಿಲೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ಸಿಕ್ತಿಲ್ಲ.  ಸರಕಾರಿ ಆಸ್ಪತ್ರೆಯಲ್ಲಿ ಬಡವರಿಗೆ ಹೆಚ್ಚಿನ ಸೌಲಭ್ಯ ಸಿಗಬೇಕು.  ನನ್ನ ಮಗಳಿಗಾದ ಸ್ಥಿತಿ ಯಾರಿಗೂ ಆಗುವುದು ಬೇಡ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ನಿರ್ಲಕ್ಷ್ಯ ನಡೆಯುತ್ತಿರುವ ಬಗ್ಗೆ ಬಾಲಕಿಯ ತಂದೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version