ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಲ್ ಕಲೆಕ್ಟರ್

ಚಿಕ್ಕಮಗಳೂರು: ಲಂಚ ಸ್ವೀಕರಿಸುವಾಗ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಚಿಕ್ಕಮಗಳೂರು ನಗರಸಭೆಯಲ್ಲಿ ನಡೆದಿದ್ದು, ಬಿಲ್ ಕಲೆಕ್ಟರ್ ನನ್ನು ಬಂಧಿಸಲಾಗಿದೆ.
ಚಿಕ್ಕಮಗಳೂರು ನಗರಸಭೆ ಬಿಲ್ ಕಲೆಕ್ಟರ್ ಪ್ರದೀಪ್ ಬಂಧಿತ ಆರೋಪಿಯಾಗಿದ್ದಾನೆ. ಇ–ಸ್ವತ್ತು ಮಾಡಿಕೊಡಲು ಏಳು ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಪ್ರದೀಪ್, ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
ರಾಕೇಶ್ ಎಂಬುವರಿಗೆ ಇ-ಸ್ವತ್ತು ಮಾಡಿಕೊಡಲು 3,000 ಮುಂಗಡ ಹಣ ಫೋನ್ ಪೇಯಲ್ಲಿ ಹಾಕಿಸಿಕೊಂಡಿದ್ದ ಪ್ರದೀಪ್ , ಇಂದು 2000 ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಲೋಕಾಯುಕ್ತ ಅಧಿಕಾರಿ ಅನಿಲ್ ನಾಯಕ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97