ರಾಜ್ಯ ಸರ್ಕಾರದ ವಿರುದ್ಧ  ಪ್ರತಿಭಟನೆಯ ನಂತರ ಬಿಜೆಪಿ ಮುಖಂಡ ಹೃದಯಾಘಾತದಿಂದ ನಿಧನ - Mahanayaka

ರಾಜ್ಯ ಸರ್ಕಾರದ ವಿರುದ್ಧ  ಪ್ರತಿಭಟನೆಯ ನಂತರ ಬಿಜೆಪಿ ಮುಖಂಡ ಹೃದಯಾಘಾತದಿಂದ ನಿಧನ

Bhanuprakash
17/06/2024

ಶಿವಮೊಗ್ಗ: ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ವಿರುದ್ಧ ಶಿವಮೊಗ್ಗ ನಗರದ ಗೋಪಿ ವೃತ್ತದಲ್ಲಿ  ನಡೆದ ಪ್ರತಿಭಟನೆಯ ಬಳಿಕ ಬಿಜೆಪಿ ಮುಖಂಡರೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ  ನಡೆದಿದೆ.


Provided by

ಬಿಜೆಪಿ ನಾಯಕ, ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ (69) ಮೃತಪಟ್ಟವರಾಗಿದ್ದಾರೆ.  ಪ್ರತಿಭಟನೆಯ ನಂತರ ಅವರು ಕುಸಿದು ಬಿದ್ದಿದ್ದು, ತಕ್ಷಣವೇ ಅವರನ್ನು ಬಿಜೆಪಿ ಕಾರ್ಯಕರ್ತರು ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ.

ಸದ್ಯ ಮೃತದೇಹವನ್ನು ಸ್ವಗ್ರಾಮ ಮತ್ತೂರಿಗೆ ರವಾನೆ ಮಾಡಲಾಗಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರಾಗಿ ಎಂ.ಬಿ ಭಾನುಪ್ರಕಾಶ್ ಗುರುತಿಸಿಕೊಂಡಿದ್ದರು. ವಿಧಾನ್​ ಪರಿಷತ್​ ಸದಸ್ಯರಾಗಿ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿಯೂ ನೇಮಕ ಗೊಂಡಿದ್ದರು. 2001 ರಿಂದ 2005ರ ತನಕ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದರು. ನಂತರ ವಿಧಾನ ಪರಿಷತ್​ ಸದಸ್ಯರಾಗಿ ಆಯ್ಕೆಯಾಗಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ