ಕಾರಿನ ಡೋರ್ ಗೆ ಡಿಕ್ಕಿಯಾದ ಬೈಕ್, ರಸ್ತೆಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್! - Mahanayaka
7:13 AM Wednesday 17 - September 2025

ಕಾರಿನ ಡೋರ್ ಗೆ ಡಿಕ್ಕಿಯಾದ ಬೈಕ್, ರಸ್ತೆಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್!

mysore road
02/02/2025

ಬೆಂಗಳೂರು: ಕಾರಿನ ಡೋರ್ ಗೆ ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಮಹಿಳೆಯ ಮೇಲೆ ಬಿಎಂಟಿಸಿ ಬಸ್ ಹರಿದ ಪರಿಣಾಮ ಮಹಿಳೆ ಸಾವನ್ನಪ್ಪಿರುವ ದಾರುಣ ಘಟನೆ  ಮೈಸೂರು ರಸ್ತೆಯ ನಾಯಂಡಹಳ್ಳಿ ಬಳಿ ನಡೆದಿದೆ.


Provided by

ಕಾಮಾಕ್ಷಿಪಾಳ್ಯ ನಿವಾಸಿ ಸರೋಜಾ(42) ಮೃತಪಟ್ಟ ಮಹಿಳೆಯಾಗಿದ್ದಾರೆ.  ಇವರು ಜ್ಞಾನಭಾರತಿಯಲ್ಲಿ ಮದುವೆ ಸಮಾರಂಭದಲ್ಲಿ ಪಾಲ್ಗೊಂಡು ತನ್ನ ಸಹೋದರನ ಜೊತೆಗೆ ಬೈಕ್ ನಲ್ಲಿ ಬರುತ್ತಿದ್ದರು.

ರಸ್ತೆಯಲ್ಲಿ ನಿಂತಿದ್ದ ಕಾರಿನ ಡೋರ್ ನ್ನು ಏಕಾಏಕಿ ತೆಗೆದ ಪರಿಣಾಮ ಬೈಕ್ ಕಾರಿನ ಡೋರ್ ಗೆ ಡಿಕ್ಕಿಯಾಗಿದೆ. ಈ ವೇಳೆ ಸರೋಜಾ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಹಿಂಬದಿಯಿಂದ ಬರುತ್ತಿದ್ದ ಬಿಎಂಟಿಸಿ ಬಸ್ ಸರೋಜಾ ಅವರ ಮೇಲೆ ಹರಿದಿದ್ದು, ಪರಿಣಾಮವಾಗಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬ್ಯಾಟರಾಯನಪುರ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,  ಕಾನೂನು ಕ್ರಮ ಕೈಗೊಂಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BR3b3qhWZWaCzpD1m6N5uu

ಇತ್ತೀಚಿನ ಸುದ್ದಿ