11:46 AM Saturday 23 - August 2025

ಟ್ರ್ಯಾಕ್ಟರ್ ನ ಅಡಿಗೆ ಸಿಲುಕಿ ಬಾಲಕನ ದಾರುಣ ಸಾವು

bhavish
18/05/2024

ಮೈಸೂರು:  ಟ್ರ್ಯಾಕ್ಟರ್ ನ ಅಡಿಗೆ ಸಿಲುಕಿ ಬಾಲಕ ದಾರುಣವಾಗಿ ಸಾವನ್ನಪ್ಪಿದ ಘಟನೆ ಮೈಸೂರಿನ ನಂಜನಗೂಡು ತಾಲೂಕಿನ ದೇವರಸನಹಳ್ಳಿಯಲ್ಲಿ ಶುಕ್ರವಾರ ಮಧ್ಯಾಹ್ನ ಘಟನೆ ನಡೆದಿದೆ.

ಭವಿಷ್ (8) ಮೃತಪಟ್ಟ ಬಾಲಕನಾಗಿದ್ದಾನೆ. ಟ್ರ್ಯಾಕ್ಟರ್ ನ ಅಡಿಗೆ ಸಿಲುಕಿದ ಬಾಲಕನ ದೇಹ ಛಿದ್ರ ಛಿದ್ರಗೊಂಡಿದ್ದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಭವಿಷ್‌ ತನ್ನ ತಾಯಿ ಮಮತಾ ಜತೆಗೆ ಚಾಮರಾಜನಗರದಿಂದ ದೇವರಸನಹಳ್ಳಿಯ ತನ್ನ ಅಜ್ಜಿ ಮನೆಗೆ ಆಗಮಿಸಿದ್ದ.  ತನ್ನ ಮಾವನ ಜೊತೆಗೆ ಟ್ರ್ಯಾಕ್ಟರ್ ನಲ್ಲಿ ಜಮೀನಿಗೆ ತೆರಳಿದ್ದ. ಟ್ರ್ಯಾಕ್ಟರ್ ನಲ್ಲಿ ಉಳುಮೆ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕೆಳಗೆ ಬಿದ್ದಿದ್ದು, ಟ್ರ್ಯಾಕ್ಟರ್ ರೋಟವೇಟರ್‌ಗೆ ಸಿಲುಕಿದ ಪರಿಣಾಮ ದಾರುಣವಾಗಿ ಸಾವನ್ನಪ್ಪಿದ್ದಾನೆ.

ಬಾಲಕನ ಸಾವಿನ ವಿಚಾರ ತಿಳಿದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ಸಂಬಂಧ ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068

ಇತ್ತೀಚಿನ ಸುದ್ದಿ

Exit mobile version