ಮದ್ರಸಕ್ಕೆ ಹೋಗಿ ಮನೆಗೆ ಬರುತ್ತಿದ್ದ ಬಾಲಕನ ಮೇಲೆ ಬೀದಿನಾಯಿಗಳಿಂದ ದಾಳಿ
ಬಜ್ಪೆ: ಮದ್ರಸಕ್ಕೆ ಹೋಗಿ ಮನೆಗೆ ಬರುತ್ತಿದ್ದ 6 ವರ್ಷದ ಬಾಲಕನ ಮೇಲೆ ಬೀದಿನಾಯಿಗಳು ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಬಜ್ಪೆಯ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೌಹಾರ್ದ ನಗರದಲ್ಲಿ ಗುರುವಾರ ನಡೆದಿದೆ.
ಅಹಿಲ್(6) ಗಾಯಗೊಂಡ ಬಾಲಕ ಎಂದು ತಿಳಿದು ಬಂದಿದೆ. ಬೆಳಿಗ್ಗೆ ಬಾಲಕ ಮದ್ರಸಕ್ಕೆ ತೆರಳಿ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಬಾಲಕನ ಮನೆಯ ಕೂಗಳತೆ ದೂರದಲ್ಲಿ ಏಕಾಏಕಿ ಅಡ್ಡನಿಂತ ಬೀದಿನಾಯಿಗಳು ಮಗುವಿನ ಮೇಲೆ ದಾಳಿ ನಡೆಸಿದೆ. ಪರಿಣಾಮವಾಗಿ ಮಗುವಿನ ಕೆನ್ನೆ, ಕೈಗೆ ಗಂಭೀರವಾದ ಗಾಯಗಳಾಗಿವೆ.
ಮಗುವಿನ ಕಿರುಚಾಟ ಕೇಳಿ ಬಾಲಕನ ತಾಯಿ ಹೊರ ಬಂದು ಮಗನನ್ನು ರಕ್ಷಿಸಿದ್ದಾರೆ. ಬಳಿಕ ಬಜ್ಪೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಕಟೀಲಿನ ದುರ್ಗ ಸಂಜೀವಿನಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD



























