ಹಣ್ಣು ಕೀಳಲು ಮರ ಹತ್ತಿದ್ದ ಬಾಲಕ ವಿದ್ಯುತ್ ಶಾಕ್ ಗೆ ಬಲಿ

ಚಿಕ್ಕಮಗಳೂರು: ನೇರಳೆ ಮರದಲ್ಲಿ ಹಣ್ಣು ಕೀಳಲು ಮರ ಹತ್ತಿದ್ದ ಬಾಲಕನೋರ್ವ ವಿದ್ಯುತ್ ಶಾಕ್ ತಗಲಿ ಮೃತಪಟ್ಟ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.
7ನೇ ತರಗತಿಯ ಆಕಾಶ್ (13) ಮೃತಪಟ್ಟ ಬಾಲಕನಾಗಿದ್ದಾನೆ. ಕಡೂರು ತಾಲೂಕಿನ ಕುಪ್ಪಾಳು ಗ್ರಾಮದ ಮೊರಾರ್ಜಿ ವಸತಿ ಶಾಲೆಯ ಆವರಣದ ನೇರಳೆ ಮರದಲ್ಲಿ ಹಣ್ಣು ಕೀಳಲು ಮರ ಹತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಒಟ್ಟು ಮೂವರು ವಿದ್ಯಾರ್ಥಿಗಳು ಮರ ಹತ್ತಿದ್ದರು. ಈ ವೇಳೆ ಆಕಾಶ್ ಮರದಿಂದ ಜಾರಿ ಬಿದ್ದಿದ್ದ. ಜಾರಿ ಬೀಳುತ್ತಿದ್ದ ವೇಳೆ ವಿದ್ಯುತ್ ತಂತಿಯನ್ನು ಹಿಡಿದಿದ್ದ. ಇದರಿಂದಾಗಿ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ.
ವಿದ್ಯುತ್ ಶಾಕ್ ನಿಂದ ನೆಲಕ್ಕೆ ಬಿದ್ದಿದ್ದ ಆಕಾಶ್ ನನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97