ಬೈಕ್ ಮೇಲೆ ಬಿದ್ದ ಕೇಬಲ್ ವೈರ್: ಯುವತಿ ಸಾವು

ಕುಣಿಗಲ್ : ಕೆಲಸ ಮುಗಿಸಿ ಬೈಕ್ ನಲ್ಲಿ ಹಿಂದುರುಗುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸುತ್ತಿದ್ದ ಕೇಬಲ್ ವೈರ್ ಮೈಮೇಲೆ ಬಿದ್ದ ಪರಿಣಾಮ ಬೈಕ್ ನ ಹಿಂಬದಿಯಲ್ಲಿ ಕುಳಿತಿದ್ದ ಯುವತಿ ದಾರುಣವಾಗಿ ಸಾವನ್ನಪ್ಪಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಇಪ್ಪಾಡಿ ಗ್ರಾಮದಲ್ಲಿ ನಡೆದಿದೆ.
ಲಕ್ಷ್ಮೀ ಬಾಯಿ ಜಾದವ್ (36) ಮೃತ ದುರ್ದೈವಿಯಾಗಿದ್ದಾರೆ. ಬೈಕ್ ಸವಾರ ಲಕ್ಷ್ಮಣ್ ಗಂಭೀರ ಗಾಯಗೊಂಡಿದ್ದು, ಕುಣಿಗಲ್ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಇವರು ಇಪ್ಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾಗಿದ್ದಾರೆ.
ಲಕ್ಷ್ಮೀ ಬಾಯಿ ಜಾದವ್ ಕುಣಿಗಲ್ ತಾಲ್ಲೂಕಿನ ಇಪ್ಪಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.ಎಂದಿನಂತೆ ಕೆಲಸ ಮುಗಿಸಿ ಹಿಂದುರುಗುವಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth