20 ಅಡಿ ಆಳಕ್ಕೆ ಉರುಳಿ ಬಿದ್ದ 6 ಜನರು ಪ್ರಯಾಣಿಸುತ್ತಿದ್ದ ಕಾರು!

19/02/2024
ಚಾರ್ಮಾಡಿ ಘಾಟ್: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಇಪ್ಪತ್ತು ಅಡಿ ಪ್ರಪಾತಕ್ಕೆ ಬಿದ್ದ ಘಟನೆ ಚಾರ್ಮಾಡಿ ಘಾಟ್ ನ ಮಲಯ ಮಾರುತ ಬಳಿ ನಡೆದಿದೆ.
ಚಿತ್ರದುರ್ಗದಿಂದಾ ಧರ್ಮಸ್ಥಳಕ್ಕೆ ಪ್ರವಾಸಕ್ಕೆ ಹೊರಟ ಆರು ಜನ ಪ್ರವಾಸಿಗರ ಕಾರು ಮಲಯ ಮಾರುತ ಬಳಿ 20 ಅಡಿ ಆಳಕ್ಕೆ ಉರುಳಿ ಬಿದ್ದಿದೆ.
ರಾಷ್ಟ್ರೀಯ ಹೆದ್ದಾರಿ ರಸ್ತೆಗೆ ತಡೆಗೋಡೆ ಇಲ್ಲದ ಕಾರಣದಿಂದಾಗಿ ನಿಯಂತ್ರಣ ತಪ್ಪಿದ ಕಾರು ಪ್ರಪಾತಕ್ಕೆ ಬಿದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ 6 ಜನರೂ ಕೂಡ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ರಸ್ತೆಯಿಂದ ಇಪ್ಪತ್ತು ಅಡಿ ಪ್ರಪಾತಕ್ಕೆ ಬಿದ್ದ ಕಾರಣ ಕಾರು ಫುಲ್ ಜಖಂ ಆಗಿತ್ತು. ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.