ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು: ಕಾರಿನಿಂದ ಇಳಿದು ಜೀವ ಉಳಿಸಿಕೊಂಡ ಪ್ರಯಾಣಿಕರು!

08/06/2024
ಚಿಕ್ಕಮಗಳೂರು: ಶಾರ್ಟ್ ಸರ್ಕ್ಯೂಟ್’ನಿಂದ ಕಾರೊಂದು ರಸ್ತೆ ಮಧ್ಯೆ ಹೊತ್ತಿ ಉರಿದ ಘಟನೆ ಚಿಕ್ಕಮಗಳೂರು ತಾಲೂಕಿನ ಸರಸ್ವತಿಪುರ ಗೇಟ್ ಬಳಿ ನಡೆದಿದೆ.
ಚಿಕ್ಕಮಗಳೂರಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರಿಗೆ ಏಕಾಏಕಿ ಬೆಂಕಿ ಹತ್ತಿಕೊಂಡಿದೆ. ಬೆಂಕಿ ಕಾಣಿಸಿಕೊಳ್ತಿದ್ದಂತೆ ಕಾರಿನಲ್ಲಿದ್ದ ಪ್ರಯಾಣಿಕರು ಕೆಳಗಿಳಿದು ಜೀವ ಉಳಿಸಿಕೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಆಗಮಿಸಿದ ಕಡೂರು ಅಗ್ನಿ ಶಾಮಕ ಠಾಣೆಯ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97