ಟ್ರಕ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು: ನಾಲ್ವರ ದಾರುಣ ಸಾವು

ಚಂಡಿಗಢ: ಕಾರೊಂದು ಟ್ರಕ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದಿದ್ದು, ಪರಿಣಾಮವಾಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಪಂಜಾಬ್ ನ ಹೋಶಿಯಾರ್ ಪುರ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.
ಹೋಶಿಯಾರ್ ಪುರದ ಮುಕೇರಿಯನ್ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ವೇಗವಾಗಿ ಬಂದ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ.
ಘಟನೆಯ ಮಾಹಿತಿಯನ್ನು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ, ಕಾರಿನಲ್ಲಿ ಸಿಲುಕಿದ್ದ ನಾಲ್ವರನ್ನು ಹೊರತೆಗೆದು ಮುಕೇರಿಯನ್ ಸಿವಿಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವೇಳೆ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ಓರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ಇನ್ನೂ ಗುರುತಿಸಲೂ ಸಾಧ್ಯವಾಗಿಲ್ಲ, ಕಾರಿನ ನಂಬರ್ ಪ್ಲೇಟ್ ಆಧಾರದಲ್ಲಿ ಮೃತರು ಜಲಂಧರ್ ನಿವಾಸಿಗಳಾಗಿರಬಹುದು ಎಂದು ಅಂದಾಜಿಸಲಾಗಿದೆ.