ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ದ್ವಿಚಕ್ರ ಸವಾರ ಸಾವು, ಇಬ್ಬರು ಮಕ್ಕಳಿಗೆ ಗಂಭೀರ ಗಾಯ

ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ದ್ವಿಚಕ್ರ ಸವಾರ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲೇರಿಯಲ್ಲಿ ವರದಿಯಾಗಿದೆ.
ಬೆಳ್ತಂಗಡಿ ತಾಲೂಕಿನ ಕಳೆಂಜಿಬೈಲು ನಿವಾಸಿ ಜಾಫರ್ (35) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ.ಇವರು ತನ್ನೆರಡು ಮಕ್ಕಳೊಂದಿಗೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ.
ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದ ಕಾರು ಇವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ಮಕ್ಕಳಿಬ್ಬರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw