ಮರಕ್ಕೆ ಡಿಕ್ಕಿ ಹೊಡೆದ ಕಾರು: ನಿಶ್ಚಿತಾರ್ಥಕ್ಕೆ ತೆರಳುತ್ತಿದ್ದ ದಂಪತಿ ಸಾವು: ಇಬ್ಬರು ಮಕ್ಕಳಿಗೆ ಗಂಭೀರ ಗಾಯ

ಚಿಕ್ಕಮಗಳೂರು: ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತರೀಕೆರೆ ತಾಲೂಕಿನ ಬೆಟ್ಟದತಾವರೆಕೆರೆ ಗ್ರಾಮದ ಬಳಿ ನಡೆದಿದೆ.
ಶ್ರೀನಿವಾಸ್ ಹಾಗೂ ಶ್ವೇತಾ ಮೃತ ದಂಪತಿ ಎಂದು ಗುರುತಿಸಲಾಗಿದ್ದು, ಇವರು ಕುಟುಂಬಸ್ಥರ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಬೆಂಗಳೂರಿನಿಂದ ಭದ್ರಾವತಿಗೆ ತೆರಳುತ್ತಿದ್ದ ಕುಟುಂಬ ಸಹಿತವಾಗಿ ದಂಪತಿ ಪ್ರಯಾಣಿಸುತ್ತಿದ್ದರು. ಈ ವೇಳೆ ತರೀಕೆರೆ ತಾಲೂಕಿನ ಬೆಟ್ಟದತಾವರೆಕೆರೆ ಗ್ರಾಮದ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ದಂಪತಿಯ ಇಬ್ಬರು ಮಕ್ಕಳಿಗೆ ಗಂಭೀರವಾಗಿ ಗಾಯವಾಗಿದ್ದು, ಗಾಯಾಳುಗಳನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw