ಬಿಜೆಪಿ ನಾಯಕರ ಭಾವ ಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ ಪ್ರಕರಣ: ಆರೋಪಿತರಿಗೆ ಥರ್ಡ್ ಡಿಗ್ರಿ ಟ್ರೀಟ್ಮೆಂಟ್!

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಡಿ.ವಿ. ಸದಾನಂದ ಗೌಡ ಅವ್ರ ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಬಂಧಿತರಾದ ಯುವಕರಿಗೆ ಪೊಲೀಸರು ಥರ್ಡ್ ಡಿಗ್ರಿ ಟ್ರೀಟ್ಮೆಂಟ್ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತಾದ ಫೋಟೋ ವೈರಲ್ ಆಗ್ತಿದೆ.
ಬೆನ್ನು, ಸೊಂಟದ ಹಿಂಭಾಗಕ್ಕೆ ಬಾಸುಂಡೆ ಬರುವ ರೀತಿ ಥಳಿಸಿದ್ದು, ಪೊಲೀಸರ ನಡೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗ್ತಿದೆ. ಪೊಲೀಸ್ ಠಾಣೆಯಲ್ಲಿ ಆರೋಪಿಗಳನ್ನು ಕೂಡಿಹಾಕಿ ಆರೋಪಿತರಿಗೆ ತೀವ್ರವಾಗಿ ಥಳಿಸಲಾಗಿದೆ. ಬಿಜೆಪಿಯ ಕೆಲ ನಾಯಕರ ಒತ್ತಡಕ್ಕೊಳಗಾಗಿ ಪೊಲೀಸರು ಈ ರೀತಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಪೊಲೀಸರ ಕಿರುಕುಳದಿಂದ ಯುವಕರು ಎದ್ದು ನಡೆಯಲಾಗದ ಸ್ಥಿತಿಯಲ್ಲಿದ್ದಾರೆ. ಏಳು ಮಂದಿ ಬಿಜೆಪಿ ಕಾರ್ಯಕರ್ತರೇ ಪುತ್ತೂರಿನಲ್ಲಿ ಪಕ್ಷದ ಸೋಲಿನ ಬಗ್ಗೆ ಆಕ್ರೋಶಗೊಂಡು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಮಾಜಿ ಸಿಎಂ ಸದಾನಂದ ಗೌಡರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ, ಶ್ರದ್ಧಾಂಜಲಿ ಕೋರಿ ಬ್ಯಾನರ್ ಹಾಕಿದ್ದರು. ಪೊಲೀಸರು ತೀವ್ರ ರೀತಿಯ ಕಿರುಕುಳ, ಚಿತ್ರಹಿಂಸೆ ಕೊಟ್ಟಿದ್ದಾರೆ. ಪೊಲೀಸರ ಕಿರುಕುಳ ವಿಷಯ ತಿಳಿದು ಅರುಣ್ ಪುತ್ತಿಲ ಅವ್ರು ಕಾರ್ಯಕರ್ತರನ್ನು ಅವರ ಕೈಯಿಂದ ಬಿಡಿಸಿ ತಂದಿದ್ದಾರೆ.
ತಮ್ಮ ಪಕ್ಷದ ಕಾರ್ಯಕರ್ತರಿಗೇ ಈ ರೀತಿ ಪೊಲೀಸರ ಮೂಲಕ ಚಿತ್ರಹಿಂಸೆ ಕೊಡಿಸಿದ್ದು ಪುತ್ತೂರಿನಲ್ಲಿ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಪುತ್ತೂರಿನ ಬಿಜೆಪಿ ನಾಯಕರ ವಿರುದ್ಧ ಕಾರ್ಯಕರ್ತರ ಒಳಗಿನಿಂದಲೇ ಆಕ್ರೋಶದ ಕಟ್ಟೆಯೊಡೆದಿದೆ.
ಇನ್ನು ಈ ಕುರಿತು ಪ್ರಕಟಣೆಯಲ್ಲಿ ಪ್ರತಿಕ್ರಿಯೆ ನೀಡಿರುವ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ವಿಕ್ರಂ ಅವರು, ಬಿಜೆಪಿ ರಾಜ್ಯಾಧ್ಯಕ್ಷರ ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣದಲ್ಲಿ ಪುತ್ತೂರು ನಗರ ಠಾಣೆ ಯಲ್ಲಿ ದಸ್ತಗಿರಿ ಮಾಡಿದ ಆರೋಪಿತರಿಗೆ ಪೊಲೀಸರು ಹಲ್ಲೆ ಮಾಡಿರುವುದಾಗಿ ಸಾಮಾಜಿಕ ಜಾಲತಾಣ ಗಳಲ್ಲಿ ಸುದ್ದಿ ಪ್ರಸಾರ ವಾಗುತ್ತಿರುವ ಬಗ್ಗೆ ತಿಳಿದು ಬಂದಿದ್ದು, ಈ ಬಗ್ಗೆ ಸತ್ಯಾoಶ ತಿಳಿದುಕೊಳ್ಳಲು ವಿಚಾರಣೆ ಕೈಗೊಳ್ಳಲಾಗುವುದು ಎಂದಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw