6:38 AM Monday 15 - September 2025

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗೆ ಬಿಗ್ ರಿಲೀಫ್

dk shivakumar 2
29/11/2023

ಬೆಂಗಳೂರು: ಉಪ ಮುಖ್ಯಮಂತ್ರಿ ಆಗಿರುವ ಜಲಸಂಪನ್ಮೂಲ ಸಚಿವ ಡಿ.ಕೆ.ಶಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಆದೇಶ ಹಿಂಪಡೆದ ರಾಜ್ಯ ಸರ್ಕಾರದ ನಿರ್ಧಾರವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

ಬುಧವಾರ ಹೈಕೋರ್ಟ್ ಸಿಜೆ ನೇತೃತ್ವದ ವಿಭಾಗೀಯ ಪೀಠ ಡಿಸಿಎಂ ಡಿ.ಕೆ.ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣ ವಿಚಾರಣೆಯನ್ನು ನಡೆಸಿ, ರಾಜ್ಯ ಸರ್ಕಾರದ ಆದೇಶವನ್ನು ಇದುವರೆಗೂ ಯಾರೂ ಪ್ರಶ್ನೆ ಮಾಡಿಲ್ಲ. ಹೀಗಾಗಿ ಸಿಬಿಐ ಪರ ವಕೀಲರ ವಾದ ಪರಿಗಣಿಸಲು ಸಾಧ್ಯವಿಲ್ಲ. ಅರ್ಜಿದಾರರು ಮನವಿ ಹಿಂಪಡೆಯಲಾಗಿದೆ ಎಂದು ಕೋರ್ಟ್ ತಿಳಿಸಿತು.

ಕಾಜಿ ಡೋರ್ಜಿ ಪ್ರಕರಣ ಉಲ್ಲೇಖಿಸಿ ಸಿಬಿಐ ಮಂಡಿಸಿದ್ದ ವಾದವನ್ನು ಹೈಕೋರ್ಟ್ ವಿಭಾಗೀಯ ಪೀಠ ಈ ವೇಳೆ ಪರಿಗಣಿಸಲಿಲ್ಲ. ರಾಜ್ಯ ಸರ್ಕಾರದ ಆದೇಶವನ್ನು ಇದುವರೆಗೂ ಯಾರೂ ಪ್ರಶ್ನೆ ಮಾಡಿಲ್ಲ. ಹೀಗಾಗಿ ಸಿಬಿಐ ಪರ ವಕೀಲರ ವಾದ ಪರಿಗಣಿಸಲು ಸಾಧ್ಯವಿಲ್ಲ. ಅರ್ಜಿದಾರರು ಮನವಿ ಹಿಂಪಡೆಯಲಾಗಿದೆ ಎಂದು ಕೋರ್ಟ್ ತಿಳಿಸಿತು.

ಇತ್ತೀಚಿನ ಸುದ್ದಿ

Exit mobile version