ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣ: ಗೃಹ ಸಚಿವ ಡಾ.ಜಿ. ಪರಮೇಶ್ವರ್ ಪ್ರತಿಕ್ರಿಯೆ - Mahanayaka
3:38 AM Sunday 14 - September 2025

ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣ: ಗೃಹ ಸಚಿವ ಡಾ.ಜಿ. ಪರಮೇಶ್ವರ್ ಪ್ರತಿಕ್ರಿಯೆ

g parameshwar
12/12/2023

ಬೆಳಗಾವಿ: ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಅಮಾನವೀಯವಾಗಿ ಥಳಿಸಿದ್ದ ಘಟನೆ ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಸೋಮವಾರ ನಡೆದಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಸುವರ್ಣ ಸೌಧದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.


Provided by

ಅಶೋಕ್ ಹಾಗೂ ಪ್ರಿಯಾಂಕ ಎಂಬ ಯುವಕ ಯುವತಿಯರು ಓಡಿ ಹೋಗಿ ಮದುವೆಯಾಗಿದ್ದಾರೆ. ಹುಡುಗಿಯ ಮನೆಯವರು ಹುಡುಗನ ಮನೆಗೆ ನುಗ್ಗಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ. ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ ಎಂದು ತಿಳಿಸಿದರು.

ಇದು ಸಮಾಜ ತಲೆತಗ್ಗಿಸುವ ಕೆಲಸವಾಗಿದೆ. ಓಡಿ ಹೋದವರನ್ನು ಹುಡುಕುವ ಪ್ರಯತ್ನ ನಡೆಯುತ್ತಿದೆ. ಅವರಿಗೆ ನಾವು ರಕ್ಷಣೆ ಕೊಡಬೇಕಾಗಿದೆ ಎಂದು ಪರಮೇಶ್ವರ್ ತಿಳಿಸಿದರು.

ಇತ್ತೀಚಿನ ಸುದ್ದಿ