ದೇವಸ್ಥಾನಕ್ಕೆ ಬಂದಿದ್ದ ದಂಪತಿ ನಾಲೆಗೆ ಹಾರಿ ಆತ್ಮಹತ್ಯೆ

ಚಿಕ್ಕಮಗಳೂರು: ದೇವಸ್ಥಾನಕ್ಕೆ ಬಂದಿದ್ದ ದಂಪತಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಲಕ್ಕವಳ್ಳಿ ಭದ್ರಾ ಜಲಾಶಯದ ಬಳಿ ನಡೆದಿದೆ.
ಭದ್ರಾವತಿ ತಾಲೂಕಿನ ಶಂಕರಪುರ ಗ್ರಾಮದ ನಿವಾಸಿಗಳಾದ ವಿಠಲ್ (48) ಗಂಗಮ್ಮ (40) ಮೃತಪಟ್ಟವರು ಎಂದು ಗುರುತಿಸಲಾಗಿದೆ. ತರೀಕೆರೆ ತಾಲೂಕಿನ ಲಕ್ಕವಳ್ಳಿ ಸಮೀಪದ ಜಗದಾಂಭ ದೇವಸ್ಥಾನಕ್ಕೆ ಬಂದಿದ್ದ ದಂಪತಿ ಸಾವಿಗೆ ಶರಣಾಗಿದ್ದಾರೆ.
ಗಂಗಮ್ಮ ಮೃತದೇಹ ಪತ್ತೆಯಾಗಿದ್ದು, ವಿಠಲ ಮೃತದೇಹಕ್ಕಾಗಿ ಶೋಧ ನಡೆಸಲಾಗುತ್ತಿದೆ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಜಂಟಿಯಾಗಿ ಹುಡುಕಾಟ ಕಾರ್ಯಾಚರಣೆ ನಡೆಸ್ತಾ ಇದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಲಕ್ಕವಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಈ ಘಟನೆ ನಡೆದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD