ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಗೆ ಚಾಕುವಿನಿಂದ ಇರಿದ ಪಾಗಲ್ ಪ್ರೇಮಿ!

ಚಿಕ್ಕಮಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಗೆ ಪಾಗಲ್ ಪ್ರೇಮಿ ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ಕಳಸ ಪಟ್ಟಣದ ಮಹಾವೀರ ಸರ್ಕಲ್ ಬಳಿ ನಡೆದಿದೆ.
ಕಳಸ ತಾಲೂಕಿನ ಹೆಗ್ಗೋಡು ಮೂಲದ ಯುವತಿ ಕಾವ್ಯ (24) ಪ್ರಿಯಕರನಿಂದ ಚಾಕು ಇರಿತಕ್ಕೊಳಗಾದ ಯುವತಿಯಾಗಿದ್ದಾಳೆ. ಈಕೆ ಕಳಸ ಖಾಸಗಿ ಕ್ಲಿನಿಕ್ ನಲ್ಲಿ ನರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.
ಪ್ರೀತಿ ನಿರಾಕರಿಸಿದ್ದಕ್ಕೆ ನಡು ರಸ್ತೆಯಲ್ಲೇ ಕೊಪ್ಪ ತಾಲೂಕಿನ ಗುಡ್ಡತೋಟ ಮೂಲದ ಆರೋಪಿ ಯುವಕ ಕಲ್ಲಿನಿಂದ ಹಲ್ಲೆ ನಡೆಸಿ, ತಲೆ ಹಾಗೂ ಬೆನ್ನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ.
ಯುವಕನ ದಾಳಿಯಿಂದ ಗಂಭೀರ ಗಾಯಗೊಂಡ ಯುವತಿಯನ್ನು ಕಳಸ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಕೃತ್ಯದ ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಸದ್ಯ ತಲೆಮರೆಸಿಕೊಂಡಿರೋ ಯುವಕನಿಗಾಗಿ ಪೊಲೀಸರಿಂದ ಶೋಧ ಕಾರ್ಯ ನಡೆಸುತ್ತಿದ್ದಾರೆ. ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನಲ್ಲಿ ಈ ಘಟನೆ ನಡೆದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD