11:25 PM Friday 12 - September 2025

ಮದುವೆಗೆ ನಿರಾಕರಿಸಿದ ನೆರೆಮನೆಯ ಹುಡುಗಿಯನ್ನು ಪಾಪಿ ಕೊಂದೇ ಬಿಟ್ಟ!

rakshitha poojari
12/09/2025

ಬ್ರಹ್ಮಾವರ: ಮದುವೆ ನಿರಾಕರಿಸಿದ್ದಕ್ಕಾಗಿ ನೆರೆಮನೆಯ ಯುವತಿಯೊಬ್ಬಳನ್ನು ಯುವಕನೊಬ್ಬ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಕ್ಕರ್ಣೆಯ ಪುಟ್ಟನಕಟ್ಟೆ ಎಂಬಲ್ಲಿ ನಡೆದಿದೆ.

ರಕ್ಷಿತಾ ಪೂಜಾರಿ(24) ಹತ್ಯೆಗೊಳಗಾದ ಯುವತಿಯಾಗಿದ್ದಾಳೆ. ಕೊಕ್ಕರ್ಣೆ ಚೆಗರಿಬೆಟ್ಟು ನಿವಾಸಿ ಕಾರ್ತಿಕ್ ಪೂಜಾರಿ ಎಂಬಾತ ಹತ್ಯೆ ನಡೆಸಿದ ಆರೋಪಿಯಾಗಿದ್ದಾನೆ.

ಯುವತಿ ತನ್ನ ಮನೆಯಿಂದ ಮಣಿಪಾಲಕ್ಕೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ನೆರೆಹೊರೆಯ ಕಾರ್ತಿಕ್ ಪೂಜಾರಿ ಬೈಕ್ ನಲ್ಲಿ ಅಡ್ಡಗಟ್ಟು ಚಾಕುವಿನಿಂದ  ಕುತ್ತಿಗೆ ಹಾಗೂ ಎದೆಯ ಭಾಗಕ್ಕೆ ಇರಿದು ಪರಾರಿಯಾಗಿದ್ದನು. ಇದರಿಂದ ಗಂಭೀರವಾಗಿ ರಕ್ಷಿತಾ ಪೂಜಾರಿ ಗಾಯಗೊಂಡಿದ್ದರು.

ಗಂಭೀರ ಹಲ್ಲೆಯಿಂದಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದ ರಕ್ಷಿತಾಳನ್ನು ತಕ್ಷಣವೇ ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸಂಜೆ ವೇಳೆ ರಕ್ಷಿತಾ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ಉಡುಪಿ ಎಸ್ ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ. ಘಟನೆ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version